ಬಡ್ಡಿ ವ್ಯವಹಾರ: ಯುವಕನ ಬರ್ಬರ ಹತ್ಯೆ
ವಿಜಯಪುರ,ಮಾ.1: ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ಪರಶುರಾಮ ಮ್ಯಾಕೇರಿ (22) ಮೃತಪಟ್ಟ ಯುವಕ.
ಪರಶುರಾಮ ಮ್ಯಾಕೇರಿ ಈತನನ್ನು ದುಷ್ಕರ್ಮಿಗಳು ಆಯುಧದಿಂದ ಹೊಡೆದು ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಹಾಗೂ ಇತರ ಹಿರಿಯ ಪೆÇಲೀಸ್ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು.
ಆಲಮೇಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.