ಪಾಕಗೆ ಜೈಕಾರ ಎಬಿವಿಪಿ ಆಕ್ರೋಶ ರಾಷ್ಟ್ರೀಯ ಹೆದ್ದಾರಿ ರಸ್ತೆ ಬಂದ ಪ್ರತಿಭಟನೆ
ಔರಾದ್ :ಮಾ.1: ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವದನ್ನು ಖಂಡಿಸಿ ಬುಧವಾರ ಎಬಿವಿಪಿ ಕಾರ್ಯಕರ್ತರು ಬೀದರ-ಔರಾದ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಕೆಲಕಾಲ ಬಂದ ಮಾಡಿ ಪ್ರತಿಭಟನೆ ನಡೆಸಿದರು.
ಪಟ್ಟಣ ಹೊರವಲಯದ ಪಪಂ ಕಚೇರಿಯ ಬಳಿಯಲ್ಲಿ ಜಮಾಯಿಸಿದ ಕಾರ್ಯಕರ್ತರು ಕೆಲಕಾಲ ಹೆದ್ದಾರಿ ರಸ್ತೆ ತಡೆದು ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಕಾರ್ಯಕರ್ತರು ಮಾತನಾಡಿ, ಕುಡಲೇ ದೇಶದ್ರೋಹಿ ಘೋಷಣೆ ಕೂಗಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಪಕ್ಷದ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೇಶ ವಿರೋಧಿ ಕೃತ್ಯ. ದೇಶದ್ರೋಹಿ ಘೋಷಣೆ ಕೂಗಿದವರನ್ನು ಬಂಧಿಸಬೇಕು. ಇನ್ನೂ ಇದನ್ನು ಪ್ರಶ್ನಿಸಿದ ಮಾಧ್ಯಮದವರನ್ನು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ನಾಸೀರ್ ಹುಸೇನ್ ಮಾಧ್ಯಮದವರನ್ನು ಗದರಿಸಿ, ನಡೀಯೋ ಯಾವನೋ ನೀನು ಎಂದು ಅಸಭ್ಯವಾಗಿ ವರ್ತಿಸುವುದು ಸಂಸದೀಯ ವರ್ತನೆಯಲ್ಲ. ಅವರದು ಅನಾಗರಿಕ ಪ್ರವೃತ್ತಿ ಎಂದು ಕಿಡಿಕಾರಿದರು.
ಇದು ದೇಶಕ್ಕೆ ಮಾರಕ ಕಾಯಿಲೆ ಇದ್ದಂತೆ. ಅದರಲ್ಲೂ ದೇಶ ದ್ರೋಹದ ಕೆಲಸ. ಇಂತಹ ವ್ಯಕ್ತಿಗಳು ಕರ್ನಾಟಕದಿಂದ ಆಯ್ಕೆ ಆಗಿರುವುದು ಇಡೀ ಕನ್ನಡ ನಾಡಿನ ಜನತೆ ತಲೆ ತಗ್ಗಿಸುವಂತೆ ಮಾಡಿದೆ. ತಕ್ಷಣ ಕಾಂಗ್ರೆಸ್ ಪಕ್ಷ ಇಂತಹ ದೇಶದ್ರೋಹಿ ಚಟುವಟಿಕೆಗಳ ಬಗ್ಗೆ ತನ್ನ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದರು. ಈ ಕುರಿತು ರಾಜ್ಯಪಾಲರಿಗೆ ಬರೆದ ಮನವಿಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಅಶೋಕ ಶೆಂಬೆಳ್ಳೆ, ಮಲ್ಲಿಕಾರ್ಜುನ ಟೇಕರಾಜ್, ಅನಿಲ ಮೇತ್ರೆ, ನಿತಿನ ಮಳಗೆ, ಧನರಾಜ ಮೇತ್ರೆ, ಅಂಕುಶ, ದಿಗಂಬರ, ಸಚಿನ, ಗಾಯತ್ರಿ ಸೇರಿದಂತೆ ನಾನಾ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡರು.