ಮಾ.3ಕ್ಕೆ ಕೆಎಸ್‍ಒಯುನ 19ನೇ ಘಟಿಕೋತ್ಸವ
ಸಂಜೆವಾಣಿ ನ್ಯೂಸ್
ಮೈಸೂರು: ಮಾ.01:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 19ನೇ ವಾರ್ಷಿಕ ಘಟಿಕೋತ್ಸವವನ್ನು ಮಾ. 3ರಂದು ಮುಕ್ತಗಂಗೋತ್ರಿಯ ಘಟಿಕೋತ್ಸವ ಭವನದಲ್ಲಿ ಹಮಿಕೊಳ್ಳಲಾಗಿದೆ ಎಂದು ಕುಲಪತಿ ಪೆÇ್ರ.ಶರಣಪ್ಪ ವಿ. ಹಲಸೆ ತಿಳಿಸಿದರು.
ವಿಶ್ವವಿದ್ಯಾನಿಲಯದ ಅತಿಥಿಗೃಹದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂವರಿಗೆ ಗೌರವ ಡಾಕ್ಟರೇಟ್, 7869 ವಿದ್ಯಾರ್ಥಿಗಳು ವಿವಿಧ ಪದವಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.
ಕರಾಮುವಿ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸುವರು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಉಪಸ್ಥಿತಿಯಲ್ಲಿ ತಾವು ಅಧ್ಯಕ್ಷತೆ ವಹಿಸುವುದಾಗಿ ಕುಲಪತಿ ವಿವರಿಸಿದರು.
ಸ್ನಾತಕ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಲ್ಲಿ ಒಟ್ಟು 10276 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇವರ ಪೈಕಿ 7869 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 76.57 ಫಲಿತಾಂಶ ಬಂದಿದೆ. ಮೂವರು ಪಿಎಚ್.ಡಿ, 30 ಚಿನ್ನದ ಪದಕ ಮತ್ತು 37 ನಗದು ಬಹುಮಾನಗಳನ್ನು ನೀಡಲಾಗುವುದು ಎಂದು ಹೇಳಿದರು.
ಮಹಿಳೆಯರು ಮೇಲುಗೈ: ಪದವಿ ಪಡೆಯಲಿರುವ 7869 ವಿದ್ಯಾರ್ಥಿಗಳಲ್ಲಿ ಪುರುಷರು 3398, 4471 ಮಹಿಳೆಯರಿದ್ದಾರೆ. ಈ ಬಾರಿ ಮಹಿಳಾ ಪದವೀಧರರ ಹೆಚ್ಚಿನ ಪದವಿಗಳನ್ನು ಪಡೆದಿದ್ದಾರೆ ಎಂದು ಪರೀಕ್ಷಾಂಗ ಕುಲಸಚಿವ ಪೆÇ್ರ.ಕೆ.ಬಿ. ಪ್ರವೀಣ ತಿಳಿಸಿದರು.
ಕನ್ನಡ, ಇತಿಹಾಸ ಮತ್ತು ರಾಜ್ಯಶಾಸ್ತ್ರದ ವಿಷಯದಲ್ಲಿ ಕ್ರಮವಾಗಿ ಮೂವರು ವಿದ್ಯಾರ್ಥಿಗಳು ಪಿಎಚ್.ಡಿ ಪಡೆದಿದ್ದಾರೆ. ಮಾನವಿಕ ವಿಷಯದ ಸ್ನಾತಕೋತ್ತರ ಪದವಿಯಲ್ಲಿ 1016, ಸ್ನಾತಕ ಪದವಿಯಲ್ಲಿ 2501, ಸಮಾಜ ವಿಜ್ಞಾನ ವಿಷಯಗಳಲ್ಲಿ 1239.
ವಾಣಿಜ್ಯಶಾಸ್ತ್ರದ ವಿಷಯದ ಸ್ನಾತಕ ಪದವಿಯಲ್ಲಿ 472, ಸ್ನಾತಕೋತ್ತರ ಪದವಿಯಲ್ಲಿ 615, ನಿರ್ವಹಣಾ ಶಾಸ್ತ್ರ ವಿಷಯದಲ್ಲಿ 719, ವಿಜ್ಞಾನ ಮತ್ತು ಗ್ರಂಥಾಲಯ ಮಾಹಿತಿ ವಿಜ್ಞಾನ ವಿಷಯದಲ್ಲಿ 1304 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ಅಂತಾರಾಷ್ಟ್ರೀಯ ಸಮೇಳನ
ಮುಕ್ತವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಮಾ.2 ಮತ್ತು 3ರಂದು ಎರಡು ದಿನಗಳ ಡಾ.ಬಿ.ಆರ್. ಅಂಬೇಡ್ಕರ್ ಅವರ ಅಭಿವೃದ್ಧಿ ದೃಷ್ಟಿಕೋನಗಳು ಮತ್ತು ಸಮಕಾಲೀನ ಜಗತ್ತು ವಿಷಯದ ಮೇಲೆ ಅಂತಾರಾಷ್ಟ್ರೀಯ ಸಮೇಳನವನ್ನು ಏರ್ಪಡಿಸಲಾಗಿದೆ ಎಂದು ಕುಲಪತಿ ಪೆÇ್ರ.ಶರಣಪ್ಪ ವಿ. ಹಲಸೆ ತಿಳಿಸಿದರು.
ಮಾ. 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮೇಳನ ಉದ್ಘಾಟಿಸುವರು. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅತಿಥಿಗಳಾಗಿ ಭಾಗವಹಿಸುವರು. ಆಕ್ಸಫರ್ಡ್ ವಿವಿ ಪ್ರಾಧ್ಯಾಪಕ ಅಸಂಗ್ ವಾಂಖೇಡೆ ಆಶಯ ಭಾಷಣ ಮಾಡಲಿದ್ದಾರೆ.
ಮಾ. 3ರಂದು ಸಂಜೆ 4 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಮಾರೋಪ ಸಮಾರಂಭ ಅಧ್ಯಕ್ಷತೆ ವಹಿಸುವರು. ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಪುರ ಭಾಗವಹಿಸುವರು. ಪೆÇ್ರ. ಯಗತಿ ಚಿನ್ನರಾವ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.
ಮೂವರಿಗೆ ಗೌರವ ಡಾಕ್ಟರೇಟ್
ಮಾರ್ಚ್ 3 ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ 19ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು ಈ ಬಾರಿ ಡಾ ಹೆಚ್. ಸಿ ಸತ್ಯನ್, ಕೆ.ಎಂ ವಿರೇಶ್ ಮತ್ತು ಮೀರಾ ಶಿವಲಿಂಗಯ್ಯ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕೆಎಸ್ ಒಯು ಕುಲಪತಿ ಪೆÇ್ರ. ವಿ. ಶರಣಪ್ಪ ಹಲಸೆ ತಿಳಿಸಿದರು.
ಕೆಎಸ್‍ಒಯು ನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಲಪತಿ ಪೆÇ್ರ. ವಿ. ಶರಣಪ್ಪ ಹಲಸೆ, ಈ ಬಾರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಿಂದ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.
ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಚಿತ್ರದುರ್ಗದ ಕೆ.ಎಂ. ವೀರೇಶ್, ಶೈಕ್ಷಣಿಕ ವಲಯದಿಂದ ಮಂಡ್ಯದ ಮೀರಾ ಶಿವಲಿಂಗಯ್ಯ ಮತ್ತು ಕರ್ನಾಟಕದ ಮಾಹಿತಿ ಆಯೋಗದ ನೂತನ ಆಯುಕ್ತ ಎಚ್.ಸಿ. ಸತ್ಯನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.
ಚಿತ್ರದುರ್ಗದ ಜಯಚಾಮರಾಜೇಂದ್ರ ಬಡಾವಣೆ ನಿವಾಸಿಯಾದ ಕೆ.ಎಂ. ವೀರೇಶ್ ಅವರು ಬಿ.ಕಾಂ, ಎಲ್ ಎಲ್ ಬಿ ಪದವೀಧರರು. ಮುರುಘರಾಜೇಂದ್ರ ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೆ ಮೂರು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಭದ್ರ ಮೇಲ್ದಂಡೆ ಯೋಜನೆ ಹೋರಾಟ ಸೇರಿ ಹಲವು ಸಾಮಾಜಿಕ ಹಾಗೂ ಶೈಕ್ಷಣಿಕ ಸೇವೆಯಲ್ಲಿ ನಿರತರಾಗಿದ್ದಾರೆ.
ಕುಲಸಚಿವ ಪೆÇ್ರ.ಕೆ.ಎಲ್.ಎನ್. ಮೂರ್ತಿ ಮುಂತಾದವರು ಇದ್ದರು.