ಪ್ರಜಾಪ್ರಭುತ್ವ ವನ ನಿರ್ಮಾಣ ಸಂವಿಧಾನ ಜಾಗೃತಿಯ ಜೊತೆಗೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಇಒ ನಿಂಗಪ್ಪ ಮಸಳಿ
ಸಂಜೆವಾಣಿ ವಾರ್ತೆ,
ವಿಜಯಪುರ,ಸೆ.೧೬: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ವನ ನಿರ್ಮಾಣ ವಿನೂತನ ಕಾರ್ಯಕ್ರಮವು ಸಂವಿಧಾನ ಜಾಗೃತಿಯ ಜೊತೆಗೆ ಪರಿಸರ ಸಂರಕ್ಷಣೆ ಹಾಗೂ ಪರಿಸರ ಪ್ರೇಮವನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮುದ್ದೇಬಿಹಾಳ ತಾ.ಪಂ ಇಒ ನಿಂಗಪ್ಪ ಮಸಳಿ ಹೇಳಿದರು.
ತಾಲೂಕ ಪಂಚಾಯತ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಅಂತರಾಷ್ರೀಯ ಪ್ರಜಾಪ್ರಭುತ್ವ ದಿನ ಅಂಗವಾಗಿ ಪ್ರಜಾಪ್ರಭುತ್ವ ವನ ನಿರ್ಮಾಣ ತಾಲೂಕಿನ ಬಿದರಕುಂದಿ ಗ್ರಾ.ಪಂ ಅರಣ್ಯ ಇಲಾಖೆ ಹೊರವಲಯದಲ್ಲಿ ೨೪೫೦ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಜಾಗೃತಿ ಜೊತೆಗೆ ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ವನ ನಿರ್ಮಾಣ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಬಿದರಕುಂದಿ ಗ್ರಾಮ ಪಂಚಾಯತ ಅಧ್ಯಕ್ಷೆ ರೂಪ ಚಲವಾದಿ, ಗ್ರಾಮ ಪಂಚಾಯತಿ ಸದಸ್ಯರು ಸಸಿಗೆ ನೀರುಣಿಸಿದರು. ಶಿಕ್ಷಕ ನಬಿಲಾಲ್ ನದಾಫ್ ಎಲ್ಲರಿಗೂ ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಬಿದರಕುಂದಿ ಗ್ರಾಮ ಪಂಚಾಯತಿ ಅಧ್ಯಕ್ಷ ರೂಪ ಚಲವಾದಿ, ಮುದ್ದೇಬಿಹಾಳ ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಗಿರೀಶ ಹಾಲುಕೊಡಿ, ಮುದ್ದೇಬಿಹಾಳ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಬಿ.ಐ. ಬಿರಾದಾರ, ಉಪ ವಲಯ ಅರಣ್ಯಾಧಿಕಾರಿ ಎ.ಎಸ್. ಚವ್ಹಾಣ, ರಾಜೇಂದ್ರ ಹುಣ್ಣೂರು, ಎ.ಒ ಚವ್ಹಾಣ, ನಬಿಲಾಲ್ ನದಾಫ್ ಐಇಸಿ ಸಂಯೋಜಕ ಸಿದ್ದು ಕಾಂಬಳೆ, ಶಿಕ್ಷಕರು ಗ್ರಾಮ ಪಂಚಾಯಿತಿ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗ ಈ ಸಂದರ್ಭದಲ್ಲಿ ಹಾಜರಿದ್ದರು.