ಐಎಎಸ್ ಅಧಿಕಾರಿ, ನಟ ಕೆ ಶಿವರಾಂರ ನಿಧನಕ್ಕೆ ಡಾ ಅಂಬಾರಾಯ ಅಷ್ಠಗಿ ಶೋಕ
ಕಲಬುರಗಿ:ಫೆ.29:ಕನ್ನಡ ಭಾಷೆಯಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪರಿಕ್ಷೆ ಬರೆದು ಐಎಎಸ್ ಅಧಿಕಾರಿಯಾಗಿ ಹೊರಹೊಮ್ಮಿದ ಹೆಮ್ಮೆಯ ಮೊದಲ ಕನ್ನಡಿಗ, ಛಲವಾದಿ ಮಹಾಸಭಾದ ಸಂಸ್ಥಾಪಕರು ಹಾಗೂ ಸಮಾಜದ ಒಳಿತಿಗಾಗಿ ಶ್ರಮಿಸಿದ ನಿವೃತ್ತ ಐಎಎಸ್ ಅಧಿಕಾರಿ ಮತ್ತು ಖ್ಯಾತ ನಟ ಕೆ.ಶಿವರಾಂ ರವರ ಅಗಲುವಿಕೆಯ ನಾಡಿಗೆ ತುಂಬಲಾರದ ನಷ್ಟ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ದಿವ್ಯಾತ್ಮಕ್ಕೆ ಭಗವಂತ ಸದ್ಗತಿ ನೀಡಲಿ ಹಾಗೂ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಡಾ ಅಂಬಾರಾಯ ಅಷ್ಠಗಿ ಪ್ರಾರ್ಥಿಸಿದ್ದಾರೆ.