ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶಕ್ಕೆ ಪೊಲೀಸರ ತಡೆ
ಕಲಬುರಗಿ,ಫೆ.29-ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಕಲಬುರಗಿ ಪ್ರವೇಶಕ್ಕೆ ಪೊಲೀಸರು ಬುಧವಾರ ತಡರಾತ್ರಿ ತಡೆಯೊಡ್ಡಿದ್ದಾರೆ. ಬೀದರ್‍ನಿಂದ ಹೊರಟಿದ್ದ ಸೂಲಿಬೆಲೆಯನ್ನು ಮಧ್ಯರಾತ್ರಿ 1 ಗಂಟೆಗೆ ತಡೆದ ಪೆÇಲೀಸರು ವಾಪಾಸ್ ಕಳುಹಿಸಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಬೀದರ್ ಜಿಲ್ಲೆಯ ಭಾಲ್ಕಿಯಿಂದ ಕಲಬುರಗಿಗೆ ತೆರಳುತ್ತಿದ್ದರು. ಇಂದು ಚಿತ್ತಾಪುರದ ಬಾಪೂ ರಾವ್ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿದ್ದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಪ್ರಯಾಣಿಸುತ್ತಿದ್ದರು.
ಇದೇ ತಿಂಗಳು 8 ರಂದು ಚಿಕ್ಕಮಗಳೂರು ಹಾಗೂ ಜನವರಿ 18 ರಂದು ರಾಯಚೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ ಆರೋಪ ಮತ್ತು ದೂರನ್ನು ಉಲ್ಲೇಖಿಸಿ ಕಾರ್ಯಕ್ರಮಕ್ಕೆ ನಿಷೇಧ ಹೇರಲಾಗಿದೆ.
ಈ ಮಧ್ಯೆ, ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರಗಿ ಜಿಲ್ಲೆಗೆ ಪ್ರವೇಶ ನಿಭರ್ಂಧ ವಿಧಿಸಿ ಉಪ ವಿಭಾಗಾಧಿಕಾರಿ ರೂಪೇಂದ್ರ ಕೌರ್ ಆದೇಶ ಹೊರಡಿಸಿದ್ದಾರೆ. ಚಕ್ರವರ್ತಿ ಸೂಲಿಬಲೆ ಪ್ರಚೋದನಾಕಾರಿ ಭಾಷಣದಿಂದ ಶಾಂತಿ ಧಕ್ಕೆ ಬರುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ಪ್ರವೇಶ ನಿಭರ್ಂಧ ಹೇರಲಾಗಿದೆ. ಹೀಗಾಗಿ ಚಕ್ರವರ್ತಿ ಸೂಲಿಬೆಲೆ ಜಿಲ್ಲೆಯೊಳಗೆ ಆಗಮಿಸಲು ಪೆÇಲೀಸರು ಬಿಡಲಿಲ್ಲ. ಅವರನ್ನು ಮರಳಿ ಬೀದರ್ ಕಡೆಗೆ ಕಳುಹಿಸಿದ್ದಾರೆ.