ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ವಿಜ್ಞಾನ ಪ್ರಾಮುಖ್ಯತೆ ಪಡೆದಿದೆ:ಮಲ್ಹಾರ
ಸೈದಾಪುರ:ಫೆ.29:ತಂತ್ರಜ್ಞಾನ ಮತ್ತು ವೈಜ್ಞಾನಿಕ ಪ್ರಗತಿಗಳು ವಿನ್ಯಾಸಗೊಳಿಸುವುದು ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ವಿಜ್ಞಾನ ಅತಿ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ ಎಂದು ಸಮಾಜ ವಿಜ್ಞಾನ ಶಿಕ್ಷಕ ಗೂಳಪ್ಪ.ಎಸ್.ಮಲ್ಹಾರ ಅಭಿಪ್ರಾಯಪಟ್ಟರು.
ಪಟ್ಟಣದ ವಿದ್ಯಾ ವರ್ಧಕ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಷಾನ ದಿನಾಚರಣೆ ಅಂಗವಾಗಿ ಸರ್.ಸಿವಿ. ರಾಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಮಕ್ಕಳಲ್ಲಿ ವೈಚಾರಿಕೆ ಮನೋಭಾವನೆ ಬೆಳೆಸಿಕೊಳ್ಳಲು ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ರಾಷ್ಟ್ರೀಯ ವಿಜ್ಞಾನ ದಿನವು ಭಾರತದಾದ್ಯಂತ ವಿವಿಧ ವೈಜ್ಞಾನಿಕ ಕ್ಷೇತ್ರಗಳಲ್ಲಿ ಇತ್ತೀಚಿನ ಸಾಧನೆಗಳಾದ ಚಂದ್ರಯಾನ 3ರ ಉಡಾವಣೆ ಮತ್ತು 2025ಕ್ಕೆ ಮಾನವ ಸಹಿತ ರಾಕೆಟ್ ಉಡಾವಣೆಗೆ ಭಾರತ ಇತಿಹಾಸವನ್ನು ಸೃಷ್ಠಿ ಮಾಡಲಿದೆ. ಇದು ರಾಷ್ಟ್ರೀಯವಾಗಿ ಹೆಮ್ಮೆಯನ್ನು ಬೆಳೆಸುತ್ತದೆ ಮತ್ತು ಭವಿಷ್ಯದ ಪೀಳಿಗೆಯನ್ನು ವೈಜ್ಞಾನಿಕ ವೃತ್ತಿಯನ್ನು ಮುಂದುವರಿಸಲು ಪ್ರೇರೇಪಿಸುತ್ತದೆ. ವಿಜ್ಞಾನ ಕಾರ್ಯಾಗಾರಗಳು, ವಸ್ತು ಪ್ರದರ್ಶನಗಳು ಮತ್ತು ವಿಜ್ಞಾನ ಮೇಳಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವ ಮೂಲಕ ಸಂವೇದನಾತ್ಮಕ ಮತ್ತು ಮೋಜಿನ ರೀತಿಯಲ್ಲಿ ವಿಜ್ಞಾನಕ್ಕೆ ಪ್ರೇರೇಪಿಸಬೇಕು. ರಾಮನ್ ಪರಿಣಾಮ’ದ ಆವಿμÁ್ಕರದ ಸ್ಮರಣಾರ್ಥವಾಗಿ ಮತ್ತು ವಿಜ್ಞಾನದ ಮಹತ್ವ ಮತ್ತು ಜನರ ಜೀವನವನ್ನು ಸುಧಾರಿಸುವಲ್ಲಿ ಅದರ ಪಾತ್ರದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.
ಮುಖ್ಯಗುರು ಲಿಂಗಾರೆಡ್ಡಿ ನಾಯಕ, ವಿಜ್ಞಾನ ಶಿಕ್ಷಕ ರಾಚಯ್ಯ ಸ್ವಾಮಿ ಬಾಡಿಯಾಲ, ವಿಶ್ವನಾಥರೆಡ್ಡಿ ಪಾಟೀಲ ಕಣೇಕಲ್, ಭೀಮಣ್ಣ, ಆನಂದ ಪಾಟೀಲ ಕೊಂಡಾಪುರ ಸೇರಿದಂತೆ ಇತರರಿದ್ದರು.