ಎಸ್.ಬಿ.ಆರ್. ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಕಲಬುರಗಿ:ಫೆ.29:ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣ ರೂಪದಲ್ಲಿ ಆಚರಿಸಲಾಯಿತು
ಪ್ರಾಚಾರ್ಯರಾದ ಶ್ರೀ ಎನ್ ಎಸ್ ದೇವರಕಲ್ ಸರ್ ಅವರ ಮಾರ್ಗದರ್ಶನದಲ್ಲಿ, ಮೇಲ್ವಿಚಾರಕರಾದ ಡಾ. ಶ್ರೀಶೈಲ್ ಹೊಗಾಡೆಯವರು ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಸೇರಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಕತೃ, ಖ್ಯಾತ ವಿಜ್ಞಾನಿ, ಭೌತಶಾಸ್ತ್ರಜ್ಞ ಸರ್ ಸಿ. ವಿ. ರಾಮನ್ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಮಾಲಾರ್ಪಣೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಮಹತ್ವವನ್ನು ಕುರಿತು ಮಾತನಾಡಿದರು.
ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಭೂಮಿಕಾ ಶೆಟಕಾರ ಮಾತನಾಡುತ್ತಾ “ಪ್ರತಿ ವರ್ಷ ಫೆಬ್ರವರಿ 28ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸು ಮುಖ್ಯ ಉದ್ದೇಶ ಖ್ಯಾತ ಭಾರತೀಯ ವಿಜ್ಞಾನಿ, ಸರ್. ಸಿ. ವಿ. ರಾಮನ್ ಅವರು 1928 ಫೆಬ್ರವರಿ 28ರ ಈ ದಿನದಂದು, ಅವರು ಫೆÇೀಟಾನ್‍ಗಳ ಚದುರುವಿಕೆಯ ವಿದ್ಯಮಾನವನ್ನು ಕಂಡುಹಿಡಿದರು, ಸರ್ ಸಿ ವಿ ರಾಮನ್ ಅವರು ಸಂಶೋಧಿಸಿದ ಈ ವಿದ್ಯಮಾನವು ಒಂದು ಅಸಾಧಾರಣ ವೈಜ್ಞಾನಿಕ ಅನ್ವೇಷಣೆಯಾಗಿದ್ದು, ಭೌತಶಾಸ್ತ್ರದ ಕ್ಷೇತ್ರದಲ್ಲಿ ಅತ್ಯಂತ ಮಹತ್ತರವಾದ ಪ್ರಭಾವವನ್ನು ಬೀರಿದೆ. ವಿಜ್ಞಾನ ಕ್ಷೇತ್ರಕ್ಕೆ ಸರ್ ಸಿ ವಿ ರಾಮನ್ ಅವರ ಕೊಡುಗೆಯನ್ನು ಗುರುತಿಸಿ, ಈ ಅನ್ವೇಷಣೆಗೆ ಅವರ ಹೆಸರನ್ನೇ ಇಟ್ಟು ಅಂದರೆ ‘ರಾಮನ್ ಎಫೆಕ್ಟ್’ ಎಂಬ ಹೆಸರನ್ನಿಟ್ಟು ಗೌರವಿಸಲಾಗಿದೆ. ರಾಮನ್ ಎಫೆಕ್ಟ್ ಆವಿμÁ್ಕರಕ್ಕಾಗಿ ಅವರಿಗೆ ಜಗತ್ತಿನ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಯನ್ನು ಕೊಟ್ಟು ಗೌರವಿಸಲಾಯಿತು. ಇದು ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ಸಿಕ್ಕ ಮೊಟ್ಟ ಮೊದಲ ನೊಬೆಲ್ ಪ್ರಶಸ್ತಿಯಾಗಿದೆ. ಅವರ ಪ್ರಸಿದ್ಧ ವಿದ್ಯಮಾನದ ಆವಿμÁ್ಕರವನ್ನು ಗುರುತಿಸಲು, ಪ್ರತಿ ವರ್ಷ ಈ ದಿನದಂದು ಭಾರತದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ನಮ್ಮ ಜೀವನದಲ್ಲಿ ವಿಜ್ಞಾನ ಹಾಗೂ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಮುಖ್ಯ ಉದ್ದೇಶ. ವಿದ್ಯಾರ್ಥಿಗಳನ್ನು ಮತ್ತು ಸಾರ್ವಜನಿಕರನ್ನು ಹೆಚ್ಚು ಹೆಚ್ಚು ವಿಜ್ಞಾನದ ಕಡೆಗೆ ಸೆಳೆಯುವ ಉದ್ದೇಶದಿಂದ, ಭಾರತದಾದ್ಯಂತ ವಿವಿಧ ಶಾಲಾ ಕಾಲೇಜುಗಳು, ಸಂಶೋಧನಾ ಸಂಸ್ಥೆಗಳು, ಮತ್ತು ವೈಜ್ಞಾನಿಕ ಸಂಸ್ಥೆಗಳು ವಿವಿಧ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸುತ್ತವೆ. ಇಂತಹ ಕಾರ್ಯಕ್ರಮಗಳು ವಿಜ್ಞಾನದ ಕುರಿತು ಪ್ರೀತಿ ಮೂಡಿಸುತ್ತವೆ, ಯುವ ಜನರು ವಿಜ್ಞಾನ ಕ್ಷೇತ್ರದಲ್ಲಿ ತಮ್ಮ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವಂತೆ ಪ್ರೇರೇಪಿಸುತ್ತವೆ. ಅದರೊಡನೆ, ಸಾಮಾಜಿಕ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಸಂಶೋಧನೆಯ ಅವಶ್ಯಕತೆಯನ್ನು ತಿಳಿಸುತ್ತವೆ. ರಾಷ್ಟ್ರೀಯ ವಿಜ್ಞಾನ ದಿನಾಚರಣೆ, ಭಾರತದ ಶ್ರೀಮಂತ ವೈಜ್ಞಾನಿಕ ಪರಂಪರೆಯನ್ನು ನೆನಪು ಮಾಡುವ ದಿನವೂ ಹೌದು. ವಿಜ್ಞಾನ ದಿನ, ವಿಜ್ಞಾನ ಜಗತ್ತಿಗೆ ಭಾರತೀಯ ವಿಜ್ಞಾನಿಗಳ ಕೊಡುಗೆಗಳನ್ನು ಸ್ಮರಿಸಿ, ಹೊಸ ತಲೆಮಾರಿನ ಯುವಕರನ್ನು ಅವರ ಹಾದಿಯಲ್ಲಿ ನಡೆಯುವಂತೆ ಪ್ರೇರಣೆ ನೀಡುತ್ತದೆ. ರಾಮನ್ ಪರಿಣಾಮದ ಅನ್ವೇಷಣೆಯ ಮೂಲಕ, ಸಿ ವಿ ರಾಮನ್ ಅವರು ವಿಜ್ಞಾನ ಕ್ಷೇತ್ರಕ್ಕೆ ಅಸಾಧಾರಣ ಕೊಡುಗೆ ನೀಡಿದ್ದು, ಜಗತ್ತಿನ ಮೇಲೆ ಎಂದೂ ಮರೆಯಲಾಗದ ಪರಿಣಾಮ ಬೀರಿದ್ದಾರೆ” ಎಂದು ಹೇಳಿದಳು.
ಈ ಸಂದರ್ಭದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಪ್ರಯುಕ್ತ ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಪ್ರತಿಜ್ಞಾ ವಿಧಿ ಪ್ರಮಾಣ ವಚನವನ್ನು ಎಲ್ಲ ವಿದ್ಯಾರ್ಥಿಗಳು, ಉಪನ್ಯಾಸಕ ವೃಂದದವರಿಂದ ಕೈಗೊಳ್ಳಲಾಯಿತು.