ಮಮದಾಪುರ: ಸಸಿ ನೆಡುವ ಕಾರ್ಯಕ್ರಮ
ಸಂಜೆವಾಣಿ ವಾರ್ತೆ,
ವಿಜಯಪುರ,ಸೆ.೧೬: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.೧೫ರಂದು ವಿಜಯಪುರ ಅರಣ್ಯ ಇಲಾಖೆ ಮತ್ತು ವಿವಿಧ ಇಲಾಖೆಯ ಸಹಯೋಗದೊಂದಿಗೆ, ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಮದಾಪುರದಲ್ಲಿ ಪ್ರಜಾಪ್ರಭುತ್ವ ದಿನದ ನಿಮಿತ್ತ ೬೦೦೦ ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷÀ ಮಲ್ಲಿಕಾರ್ಜುನ ಗಂಗೂರ್, ಅರಣ್ಯ ಇಲಾಖೆಯ ಅಧಿಕಾರಿಗಳು, ತಾಲೂಕಾ ಪಂಚಾಯತ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳು, ನರೇಗಾ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಇತರರರು ಹಾಜರಿದ್ದರು.