ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಸಂಜೆವಾಣಿ ವಾರ್ತೆ
ದಾವಣಗೆರೆ, ಫೆ. 29- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024-25ನೇ ಸಾಲಿನ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ತಿಳಿಸಿದ್ದಾರೆ.ಸದಸ್ಯತ್ವದ ನವೀಕರಣ ಹಾಗೂ ಅರ್ಹ ಪತ್ರಕರ್ತರು ಹೊಸ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪರ್ಯಾಯ ಸಂಘದಲ್ಲಿ ಸದಸ್ಯರಾದವರ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಪ್ರಧಾನ  ಕಾರ್ಯದರ್ಶಿ ಎ. ಫಕೃದ್ದೀನ್ ಸ್ಪಷ್ಟಪಡಿಸಿದ್ದಾರೆ. ಅರ್ಜಿ ಪಡೆಯಲು ಮತ್ತು ಭರ್ತಿ ಮಾಡಿದ ಅರ್ಜಿಯನ್ನು ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಕಛೇರಿ ಅಥವಾ  ದಾವಣಗೆರೆ ಇಮೇಜ್ ಪತ್ರಿಕೆ ಕಾರ್ಯಾಲಯ, ಸಿಟಿ ಸೆಂಟ್ರಲ್ ಆಸ್ಪತ್ರೆ ಹಿಂಭಾಗ, ಪಿ.ಜೆ.ಬಡಾವಣೆ, ದಾವಣಗೆರೆ ಇಲ್ಲಿ ಬರುವ ಮಾರ್ಚ್ 5ರೊಳಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಸಂಘದ ಜಿಲ್ಲಾಧ್ಯಕ್ಷ  ಇ.ಎಂ.ಮಂಜುನಾಥ (94482 77772), ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್ ( 84949 49909), ಜಿಲ್ಲಾ ಖಜಾಂಚಿ  ಎನ್.ವಿ.ಬದರಿನಾಥ್ (94487 28858) ಅವರನ್ನು ಸಂಪರ್ಕಿಸಬಹುದು.