ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಕ್ಕಾಗಿ ರೈತರ ಪಾದಯಾತ್ರೆ; ಪ್ರತಿಭಟನೆ

ಸಂಜೆವಾಣಿ ವಾರ್ತೆ
ದಾವಣಗೆರೆ.ಫೆ.29: ಬೆಂಬಲ ಬೆಲೆಗೆ ಕಾನೂನು ಮಾನ್ಯತೆ, ದೀಟೂರು, ಸಾಸ್ವೇಹಳ್ಳಿ ಏತ ನೀರಾವರಿ ಕಾಮಗಾರಿಗೆ ಚುರುಕು, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ನೇತೃತ್ವದಲ್ಲಿ ಫೆ.೧೯ ರಂದು ಚನ್ನಗಿರಿ ತಾಲೂಕು ನಲ್ಲೂರಿನಿಂದ ದಾವಣಗೆರೆಯ ಜಿಲ್ಲಾಽಕಾರಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದ ರೈತರು ಗುರುವಾರ ಜಿಲ್ಲಾ ಽಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದರು.ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರದ ಬೆಂಬಲ ಬೆಲೆಗೆ ಸೂಕ್ತ ಕಾನೂನಾತ್ಮಕ ರೂಪ ನೀಡಬೇಕು. ಆಗ ಮಾತ್ರ ಬೆಂಬಲ ಬೆಲೆ ಯೋಜನೆಗೆ ನಿಜವಾದ ಅರ್ಥ ಬರುತ್ತದೆ. ಮಾರು ಕಟ್ಟೆಯಲ್ಲಿ ಕನಿಷ್ಟ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಕೃಷಿ ಉತ್ಪನ್ನ ಖರೀದಿಸಿದವರಿಗೆ ೬ ತಿಂಗಳ ಜೈಲು ಶಿಕ್ಷೆ, ಪರವಾ ನಗಿ ರದ್ಧತಿ ಒಳಗೊಂಡಂತೆ ಸೂಕ್ತ ಕ್ರಮ ತೆಗೆದುಕೊಂಡಲ್ಲಿ ಕೃಷಿ ಉತ್ಪನ್ನಗಳಿಗೆ ಬೆಲೆ ದೊರೆಯುತ್ತದೆ. ಇಲ್ಲವಾದಲ್ಲಿ ಬೆಂಬಲ ಬೆಲೆ ಯೋಜನೆ ಪ್ರಯೋಜನಕ್ಕೆ ಬರುವುದೇ ಇಲ್ಲ ಎಂದು ತಿಳಿಸಿದರು.ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ, ಕಮ್ಮಾರಘಟ್ಟ ಏತ ನೀರಾವರಿ ಕಾಮಗಾರಿ ತ್ವರಿತ ವೇಗದಲ್ಲಿ ಪೂರ್ಣಗೊಳಿಸಬೇಕು. ಚನ್ನಗಿರಿ ತಾಲೂಕಿನ ಗಾಣದಕಟ್ಟೆ ರಿ.ಸ.ನಂ.೧ ಮತ್ತು ಎನ್.ಗಾಣದಕಟ್ಟೆ ರಿ.ನಂ.೮, ಶಿವಗಂಗೆ ಹಾಳ್ ರಿ.ಸ.ನಂ.೪ರಲ್ಲಿ ಎಂಪಿಎಂ ಮಿಲ್ ಗೆ ನೀಡಿದ ಭೋಗ್ಯದ ಅವಧಿ ಪೂರ್ಣವಾಗಿದೆ. ಹಲವಾರು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ತಕ್ಷಣವೇ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.ಬಗರ್ ಹುಕುಂ ಸಾಗುವಳಿದಾರರು ಹಕ್ಕುಪತ್ರಕ್ಕಾಗಿ ೫೦, ೫೩ ಮತ್ತು ಈಗಾಗಲೇ ೫೭ ಅರ್ಜಿ ಸಲ್ಲಿಸಿದ್ದಾರೆ. ತಾಲೂಕಿ ನಾದ್ಯಂತ ವಜಾಗೊಳಿಸಿದ್ದನ್ನು ತಕ್ಷಣ ಮರು ಪರಿಶೀಲಿಸಿ, ಹಕ್ಕುಪತ್ರ ನೀಡಬೇಕು. ಅರಣ್ಯ ಭೂಮಿ ಸಾಗುವಳಿದಾರರಿ ಗೆ ಹಕ್ಕುಪತ್ರ ನೀಡುವ ನಿಟ್ಟಿನಲ್ಲಿ ಸಣ್ಣಪುಟ್ಟ ಲೋಪದೋಷವುಳ್ಳ ಅರ್ಜಿದಾರರಿಗೆ ಪತ್ರದ ಮೂಲಕ ದಾಖಲೆ ನೀಡಲು ಸೂಚಿಸಿ, ಸಾಗುವಳಿದಾರರಿಗೆ ಹಕ್ಕುಪತ್ರ, ಪಹಣಿ ನೀಡುವ ಮೂಲಕ ಜೀವನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.