ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗೃಹ ಕಾರ್ಮಿಕರ ಪ್ರತಿಭಟನೆ

ಸಂಜೆವಾಣಿ ವಾರ್ತೆ
ದಾವಣಗೆರೆ.ಫೆ.೨೭: ಗೃಹ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷತೆಯ ಪಿಎಫ್, ಇಎಸ್‌ಐ, ಪಿಂಚಣಿ, ವೈದ್ಯಕೀಯ ವಿಮೆ, ಮಾತೃತ್ವ ಸೌಲಭ್ಯ, ವಿದ್ಯಾರ್ಥಿವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ನಾಗಮ್ಮ, ಗೃಹ ಕಾರ್ಮಿಕರಿಗೆ ವಸತಿ ಕಲ್ಪಿಸ ಬೇಕು. ಗೃಹ ಕಾರ್ಮಿಕರ ಯೋಗ್ಯ ಉದ್ಯೋಗಕ್ಕಾಗಿ ಐಎಲ್‌ಒ ಸಿ 189ನ್ನು ಸ್ಥಾಪಿಸ ಬೇಕು. ಗೃಹಕಾರ್ಮಿಕರಿಗೆ ರಾಷ್ಟ್ರೀಯ ಶಾಸನವನ್ನು ರೂಪಿಸುವುದು. ಪಸ್ತುತ ಸಾಲಿನ ಕನಿಷ್ಟವೇತನವನ್ನು ಪರಿಷ್ಕರಿಸ ಬೇಕು. ಸರಕಾರದ ಸೌಲಭ್ಯ ಪಡೆಯಲು ಖಡ್ಡಾಯ ಮಾಡಿರುವ ಆಹಾರ ಪಡಿತರ ಚೀಟಿಯನ್ನು ಅಸಂಘಟಿತ ಕಾರ್ಮಿಕರಿಗೆ ಅನ್ವಯಿಸಬಾರದು ಎಂದು ಆಗ್ರಹಿಸಿದರು.ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ, ಕರ್ನಾಟಕ ಗೃಹ ಕಾರ್ಮಿಕರ ಚಳುವಳಿ ಮತ್ತು ಸಿಎಫ್‌ಟಿಯುಐಗಳು ಒಂದಾಗಿ ಅಂತರಾಷ್ಟ್ರೀಯ ಗೃಹ ಕಾರ್ಮಿಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಜೊತೆಗೆ ಗೃಹ ಕಾರ್ಮಿಕರಿಗೆ ಆಗುತ್ತಿರುವ ಶೋಷಣೆ ಮತ್ತು ಅನ್ಯಾಯದ ವಿರುದ್ಧ ಹೋರಾಡಿ ಗೃಹ ಕಾರ್ಮಿಕರಿಗೆ ನ್ಯಾಯ ದೊರಕಿಸುವುದು ನಮ್ಮ ಗುರಿ ಎಂದು ಹೇಳಿದರು.ಈ ವೇಳೆ ರಂಗಮ್ಮ, ಲಕ್ಷ್ಮಮ್ಮ, ಶಾರದಮ್ಮ, ಗಂಗಮ್ಮ ಇತರರು ಇದ್ದರು.