ನೇಣು ಹಾಕಿಕೊಂಡು ಯುವತಿ ಆತ್ಮಹತ್ಯೆ
ಕಲಬುರಗಿ,ಫೆ.28-ನೇಣು ಹಾಕಿಕೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಬ್ಬಿ ಕಾಲೋನಿಯಲ್ಲಿ ನಡೆದಿದೆ.
ಶ್ರೀದೇವಿ ತಂದೆ ಬಸವರಾಜ ಹೊಸಮನಿ (22) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.
ಮಾನಸಿಕ ಅಸ್ವಸ್ಥಳಾಗಿದ್ದ ಶ್ರೀದೇವಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಓಡಣಿಯಿಂದ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮೃತಳ ತಂದೆ ಬಸವರಾಜ ಹೊಸಮನಿ ಅವರು ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.