ಕಲಬೆರಕೆ ಸೇಂದಿ ಮಾರಾಟ: ಓರ್ವನ ಬಂಧನ
ಕಲಬುರಗಿ,ಫೆ.28-ನಗರದ ವಿಜಯನಗರ ಕಾಲೋನಿಯಲ್ಲಿರುವ ಮನೆಯೊಂದರ ಎದರುಗಡೆ ಕಲಬೆರಕೆ ಸೇಂದಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇಲೆ ಚೌಕ್ ಪೊಲೀಸ್ ಠಾಣೆ ಪಿಎಸ್‍ಐ ಹಾಗೂ ಸಿಬ್ಬಂದಿ ದಾಳಿ ನಡೆಸಿ ಕನ್ನಯ್ಯ ಚೌಧರಿ ಎಂಬಾತನನ್ನು ಬಂಧಿಸಿ 450 ರೂ.ಮೌಲ್ಯದ 13 ಲೀಟರ್ ಕಲಬೆರಕೆ ಸೇಂದಿ ಜಪ್ತಿ ಮಾಡಿದ್ದಾರೆ.
ಈ ಸಂಬಂಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.