ಮೋದಿ ಕುರಿತು ಚಕ್ರವರ್ತಿ ಸೂಲಿಬೆಲೆ ಭಾಷಣ ನಾಳೆ
ಚಿತ್ತಾಪುರ:ಫೆ.28: ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರ ಹತ್ತು ವರ್ಷಗಳ ಅಭಿವೃದ್ಧಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲೆಬೆಲೆ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬಾಪುರಾವ ಪಾಟೀಲ ಕಲ್ಯಾಣ ಮಂಟಪದಲ್ಲಿ ನಮೋ ಬ್ರಿಗೇಡ್ ಮತ್ತು ಬಿಜೆಪಿ ತಾಲೂಕು ಘಟಕದಿಂದ ಫೆ.29ರಂದು ಸಂಜೆ 6 ಗಂಟೆಗೆ ನಮೋ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮಕ್ಕೆ ಬಿಜೆಪಿಯ ಎಲ್ಲಾ ಮುಖಂಡರು ಹಿರಿಯರು, ಯುವಕರು ಹೆಚ್ಚಿನ ಸಂಖ್ಯೆಯ ಪಾಲ್ಗೊಳ್ಳಬೇಕು ಎಂದರು.
ನಮೋ ಬ್ರಿಗೇಡ್ ಜಿಲ್ಲಾ ಸಂಚಾಲಕ ಅನಿಲಕುಮಾರ ತಂಬಾಕೆ ಮಾತನಾಡಿ ಪ್ರಧಾನಿ ಮೋದಿಯವರ ಸಾಧನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಚಕ್ರವರ್ತಿ ಸೂಲಿಬೆಲೆ ರಾಜ್ಯಾದ್ಯಂತ ಕಾರ್ಯಕ್ರಮಗಳು ಹಮ್ಮಿಕೊಂಡಿದ್ದಾರೆ. ಈ ಮೂಲಕ ಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳು ಗೆದ್ದು ಮತ್ತೊಮ್ಮೆ ಮೋದಿ ಆಡಳಿತ ತರುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಮೋ ಬ್ರಿಗೇಡ್ ತಾಲೂಕು ಸಂಚಾಲಕ ಚಂದ್ರಕಾಂತ ದೊಡ್ಡಮನಿ, ಸಹ ಸಂಚಾಲಕ ಗುರುರಾಜ್ ವೈಷ್ಣವ್ ರಾವೂರ, ತಾಲೂಕು ವಿಸ್ತಾರಕ ಚಿದಾನಂದ ಹಚ್ಚಾಳ, ಬಿಜೆಪಿ ಮುಖಂಡರಾದ ನಾಗರಾಜ ಹೂಗಾರ, ಮಲ್ಲಿಕಾರ್ಜುನ ಪೂಜಾರಿ, ಪ್ರಸಾದ್ ಅವಂಟಿ, ಯಲ್ಲಾಲಿಂಗ ಪೂಜಾರಿ, ಶ್ರೀಕಾಂತ ಸುಲೇಗಾಂವ, ಅಜಯ್ ಬಿದರಿ ಇದ್ದರು.