ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಮರತೂರಕರ್ ಆಕ್ರೋಶ
ಕಲಬುರಗಿ:ಫೆ.28: ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್ ನ ನಾಸಿರ ಹುಸೇನ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಖಂಡನೀಯ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ತೀವ್ರವಾಗಿ ಖಂಡಿಸಿದ್ದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮಾನ ಮರ್ಯಾದೆ ನಾಚಿಕೆ ಇಲ್ಲ. ವಿಧಾನಸೌಧದಲ್ಲಿ ಪಾಕ ಪರ ಘೋಷಣೆಯನ್ನು ಕೂಗಿದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.ರಾಜ್ಯಪಾಲರು ಕಾಂಗ್ರೆಸ್ ಸರಕಾರವನ್ನು ಕೂಡಲೇ ವಜಾ ಮಾಡಲಿ,ಈ ಪಾಕ್ ಪರ ಘೊಷಣೆ ಕೂಗಿರುವ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಅವರು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ನ 3 ಅಭ್ಯರ್ಥಿಗಳು ಗೆದ್ದ ಬಳಿಕ ಪಾಕ್ ಪರ ಘೋಷಣೆ ಕೂಗಿದ್ದಾರೆ.ಇದು ಮಹಾ ಅಪರಾದ.ಪಾಕಿಸ್ತಾನ ಹುಟ್ಟಿದೇ ಭಾರತದ ಮೇಲೆ ದ್ವೇಷ ಹಿಂದೂಗಳ ಮಾರಣ ಹೋಮದಿಂದ ಕಾಲ ಕರೆದು ಪಾಕ್ 1948,1965,1973ರಲ್ಲಿ ದಾಳಿ ಮಾಡಿತ್ತು.ಇಂತಹ ಪಾಕಿಸ್ತಾನ ಪರ ಘೋಷಣೆ ಕೂಗಿದ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಅವರು ಆಗ್ರಹಿಸಿದ್ದಾರೆ.