ಎಸ್ ಜಿ ಟಿ ಕಾಲೇಜ್ ವಿದ್ಯಾರ್ಥಿಗಳಿಂದ ರಕ್ತದಾನ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಫೆ.28: ನಗರದ ಎಸ್ ಜಿ ಟಿ ಪದವಿ ಮಹಾವಿದ್ಯಾಲಯದ ಎನ್ ಎಸ್ ಎಸ್  ಘಟಕದಿಂದ  ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಪದವಿ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು‌.
 ಶಿಬಿರದಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. 
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಸ್. ಎನ್. ರುದ್ರಪ್ಪ,  ಕಾರ್ಯದರ್ಶಿ ನಾಗರಾಜ, ಕಾಲೇಜಿನ ಸಿಬ್ಬಂದಿ ಹಾಗೂ ಸ್ಪಂದನ ರಕ್ತ ಕೇಂದ್ರದ ಡಾ. ಮುಖೇಶ್ ಕುಡಪಾಲಿ, ಡಾ ಪ್ರಕಾಶ್ ಪಾಟೀಲ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.