ಪಾಕ್‍ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿ, ಫೆ 28: ರಾಜ್ಯಸಭಾ ಚುನಾವಣೆಯ ಫಲಿತಾಂಶದ ಬಳಿಕ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‍ದಿಂದ ತಹಶಿಲ್ದಾರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರಾಜ್ಯದ ಮುಖ್ಯಮಂತ್ರಿಗಳು ಘಟನೆಯ ಹೊಣೆಯನ್ನು ಹೊತ್ತು ರಾಜೀನಾಮೆ ನೀಡಬೇಕು. ಇಲ್ಲವಾದರೆ ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ, ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.