ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ರಸ್ತೆ ಬಂದ್
ಸಂಜೆವಾಣಿ ನ್ಯೂಸ್
ಮೈಸೂರು: ಫೆ.28:- ಕೇಂದ್ರ ಸರ್ಕಾರವು ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಶಾಸನಬದ್ಧಗೊಳಿಸುವುದು ಹಾಗೂ ರಾಜ್ಯ ಸರ್ಕಾರವು ಕೃಷಿ ಸಾಲ ಮನ್ನಾಗೆ ಮುಂದಾಗುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರು-ಬನ್ನೂರು ರಸ್ತೆ ಬಂದ್ ಮಾಡಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮಂಗಳವಾರ ಪ್ರತಿಭಟನೆ ನಡೆಸಿದರು.
ರಾಜ್ಯಾದ್ಯಂತ ಗ್ರಾಮೀಣ ಬಂದ್‍ಗೆ ಕರೆ ನೀಡಿದ್ದ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯೂ ರೈತರ ಪರಿಸ್ಥಿತಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವ್ಯಾವಹಾರಿಕ ಚಟುವಟಿಕೆಗಳ ಸ್ಥಗಿತಗೊಳಿಸಿ ರೈತರೆಲ್ಲರೂ ನಗರದ ನಜûರ್‍ಬಾದ್ ಪೆÇಲೀಸ್ ಠಾಣೆ ಮುಂಭಾಗದಿಂದ ಟ್ರಾಕ್ಟರ್‍ಗಳ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದರೂ ಆದರೆ, ಪೆÇಲೀಸ್ ಇಲಾಖೆ ಅನುಮತಿ ಇಲ್ಲದ ಕಾರಣ ಟ್ರಾಕ್ಟರ್‍ಗಳನ್ನು ವಶಪಡಿಸಿಕೊಂಡರು. ಈ ವೇಳೆ ಪೆÇಲೀಸರು ಮತ್ತು ರೈತ ಮುಖಂಡರ ನಡುವೇ ಮಾತಿಚಕಮಕ್ಕಿ ನಡೆಯಿತು.
ಟ್ರಾಕ್ಟರ್‍ಗಳಿಂದ ಸಂಚಾರಕ್ಕೆ ಸಮಸ್ಯೆಯಾಗುತ್ತದೆ ಎಂದು ನಂತರ ಎರಡು ಟ್ರಾಕ್ಟರ್‍ಗಳನ್ನು ಮಾತ್ರ ಹಿಂದಿರುಗಿಸಿದ್ದರೂ. ರೈತರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡಿ ಮನವಿ ನೀಡಲು ತೆರಳಿದ್ದಾಗ ಅವರಿಗೆ ಪ್ರತಿಭಟನೆ ಮಾಡಲು ಸೂಕ್ತ ಸ್ಥಳ ನಿಯೋಜಿಸದ ಕಾರಣಕ್ಕೆ ಬೇಸರಗೊಂಡ ರೈತರು ಮೈಸೂರು-ಬನ್ನೂರು ಮುಖ್ಯ ರಸ್ತೆಯನ್ನು ಬಂದ್ ಮಾಡಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡಿದರು. ಈ ವೇಳೆ ಕೆಲ ಸಮಯ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.
ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಡಿಸಿ ಅವರಿಗೆ ವಿವಿಧ ಬೇಡಿಕೆಗಳ ಹೊತ್ತು ದೆಹಲಿಯತ್ತ ಸಾಗುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸುತ್ತಿರುವ ದೌರ್ಜನ್ಯ ನಿಲ್ಲಬೇಕು. ಅವರ ನ್ಯಾಯಯುತ ಬೇಡಿಕೆ ಈಡೇರಬೇಕು. ಕೃಷಿ ಕಾಯ್ದೆ ಹಿಂಪಡೆಯುವಂತೆ ರೈತರು ನಡೆಸಿದ ಹೋರಾಟದ ವೇಳೆ ಕೇಂದ್ರ ನೀಡಿದ್ದ ವಾಗ್ದಾನಗಳನ್ನು ಮರೆತಿದ್ದು, ರೈತರನ್ನು ವಂಚಿಸುವ ನಡೆಯನ್ನು ಕೈ ಬಿಡಬೇಕು. ರಾಜ್ಯ ಸರ್ಕಾರವೂ ಬೆಂಬಲ ಬೆಲೆ, ಸಾಲ ಮನ್ನಾ ವಿಚಾರದಲ್ಲಿ ರೈತಪರವಾಗಿ ಕ್ರಮವಹಿಸಬೇಕು ಎಂದು ಆಗ್ರಹಿಸದರು.
ಈ ಬಾರಿಯ ಅಬುದಾಬಿಯಲ್ಲಿ ನಡೆಯಲಿರುವ ವಿಶ್ವ ವ್ಯಾಪರ ಸಂಸ್ಥೆಯ ಶೃಂಗಸಭೆಯಲ್ಲಿ ಭಾರತವು ಅದರೊಂದಿಗಿನ ಒಪ್ಪಂದದಿಂದ ಹೊರ ಬರಬೇಕು. ಮುಂದುವರಿದ ದೇಶಗಳು ತಮ್ಮಲ್ಲಿನ ಕೃಷಿ ಉತ್ಪನ್ನವನ್ನು ಇಲ್ಲಿ ತಂದು ಮಾರುವ, ನಮ್ಮ ರೈತರನ್ನು ಸಂಕಷ್ಟಕ್ಕೆ ದೂಡುವ ಯೋಜನೆಗಳು ನಮಗೆ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದಿನ ಸರ್ಕಾರದ ಭೂ ಸುಧಾರಣಾ ಕಾಯ್ದೆಯನ್ನು ಹಿಂಪಡೆಯಬೇಕು. ರೈತರ ಪಂಪ್‍ಸೆಟ್‍ಗಳಿಗೆ ಸರ್ಕಾರವೇ ಉಚಿತವಾಗಿ ವಿದ್ಯುತ್ ಸಂಪರ್ಕ ನೀಡಬೇಕು. ಜಿಲ್ಲೆಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಸಾಗುವಳಿ ಪತ್ರ ವಿತರಿಸಬೇಕು. ಜಿಲ್ಲೆಯ ಕೆರೆಗಳ ಒತ್ತುವರಿ ತೆರವುಗೊಳಿಸಲು ಕ್ರಮ ವಹಿಸಬೇಕು. ಭೂಮಿಯ ಫಲವತ್ತತೆ ಉಳಿಸುವ ಕುರಿತ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ 223 ತಾಲ್ಲೂಕುಗಳು ಬರದಿಂದ ತತ್ತರಿಸಿವೆ. ಹೀಗಾಗಿ ರೈತರ ಸಾಲದ ಮೇಲಿನ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಬೇಕು. ಬರದಿಂದ ಕಂಗೆಟ್ಟಿರುವ ರೈತ ಸಮುದಾಯಕ್ಕೆ ಈ ರೀತಿಯ ಯೋಜನೆ ವರದಾನವಾಗಲಿದೆ. ಕೇಂದ್ರ ಸರ್ಕಾರವು ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಶಾಸನ ಬದ್ಧಗೊಳಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಪತ್ರಿಭಟನೆಯಲ್ಲಿ ಪದಾಧಿಕಾರಿಗಳಾದ ಮಂಜುಕಿರಣ್, ವಿದ್ಯಾಸಾಗರ್ ರಾಮೇಗೌಡ, ಸತೀಶ್‍ರಾವ್, ಇಮ್ಮಾವು ರಘು, ಶ್ವೇತಾ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದರು