ಜಾತಿ,ಬೇಧವಿಲ್ಲದೇ ಮಾನವ ಸರಪಳಿ ನಿರ್ಮಾಣ
ಕೋಲಾರ,ಸೆ,೧೬- ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಐತಿಹಾಸಿಕ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಯೊಬ್ಬರೂ ಕೈಜೋಡಿಸಿ ಜಾತಿ,ಧರ್ಮ,ಬಡವ,ಶ್ರೀಮಂತರೆಂಬ ಬೇಧವಿಲ್ಲದೇ ನಾವೆಲ್ಲಾ ಒಂದೇ ಎನ್ನುವ ಸಂದೇಶವನ್ನು ವಿಶ್ವಕ್ಕೆ ಸಾರಿದಂತಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿಲ್ಲಾ ನೌಕರರ ಸಂಘ ಹಾಗೂ ಶಿಕ್ಷಕ ಗೆಳೆಯರ ಬಳಗದ ಪದಾಧಿಕಾರಿಗಳೊಂದಿಗೆ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ನಿರ್ಮಾಣದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಸಾವಿರಾರು ಶಾಲಾ ಮಕ್ಕಳು ಇಂದು ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದಾರೆ, ನಮ್ಮ ಸಂವಿಧಾನದ ಶಕ್ತಿಯನ್ನು ಪ್ರದರ್ಶಿಸಿ ನಾವೆಲ್ಲಾ ಒಂದೇ ಎಂಬ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವ ಬಲಗೊಳ್ಳಲು ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳಬೇಕು, ಸಂವಿಧಾನ ನೀಡಿರುವ ಹಕ್ಕುಗಳ ಜತೆಗೆ ನಮ್ಮ ಕರ್ತವ್ಯಗಳನ್ನು ಮರೆಯಬಾರದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು, ಕಾರ್ಯಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ಶಿಕ್ಷಕ ಗೆಳೆಯರ ಬಳಗದ ಅಧ್ಯಕ್ಷ ಎಸ್.ನಾರಾಯಣಸ್ವಾಮಿ,ಬಳಗದ ವೆಂಕಟಾಚಲಪತಿಗೌಡ, ಚಿಕ್ಕಣ್ಣ, ನಿವೃತ್ತ ಪಿಡಿಒ ನಾಗರಾಜ್, ನೌಕರರ ಸಂಘದ ಸಂದೀಪ್, ಸುನಿಲ್,ಚಂದುಪ್ರೇಮಾಕುಮಾರಿ ಮತ್ತಿತರರಿದ್ದರು.