ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ:ಮಹಿಳೆ ವಿರುದ್ಧ ಪ್ರಕರಣ
ಕಲಬುರಗಿ,ಫೆ.27-ನಗರದ ದುಬೈ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ವಿರುದ್ಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಮೇಲೆ ಸಿಸಿಬಿ ಘಟಕದ ಪಿಐ ಪುಲ್ಲಯ್ಯ ಹಾಗೂ ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿ ಅವರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಿದ್ದಾರೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ವಿರುದ್ಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.