ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಸಿ: ತಹಶೀಲ್ದಾರ ದಾಮಾ
ಚಿಟಗುಪ್ಪ,ಫೆ 27:ಅಂಗಡಿ ಮುಂಗಟ್ಟುಗಳು, ಹೋಟೆಲ್‍ಗಳು, ಸೇರಿದಂತೆ ಇನ್ನಿತರ ವಾಣಿಜ್ಯ ಮಳಿಗೆಗಳ ಮೇಲೆ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಅಳವಡಿಸಿಕೊಳಬೇಕು ಎಂದು ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ನಡೆದ ವ್ಯಾಪಾರಸ್ಥರ ಸಭೆಯಲ್ಲಿ ತಹಶೀಲ್ದಾರ್ ರವೀಂದ್ರ ದಾಮಾ ಸೂಚಿಸಿದರು.ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟುಗಳು, ಹೋಟೆಲ್‍ಗಳು, ಸೇರಿದಂತೆ ಇನ್ನಿತರ ವಾಣಿಜ್ಯ ಮಳಿಗೆಗಳ ನಾಮಫಲಕಗಳು ಕಡ್ಡಾಯವಾಗಿ ಒಂದು ವಾರದ ಒಳಗಾಗಿ ಪ್ರತಿಶತ 60ರಷ್ಟು ಕನ್ನಡ ಭಾಷೆ ಬಳಸಬೇಕು. ಇಲ್ಲದಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. ಚಿಟಗುಪ್ಪ ತಾಲೂಕ ಕೇಂದ್ರ ಸ್ಥಾನವಾಗಿದ್ದು ಪ್ರತಿದಿನ ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಜನರು ವ್ಯಾಪಾರಕ್ಕೆ ಬರುತ್ತಾರೆ. ಅವಾಗ ಸಾರ್ವಜನಿಕರಿಗೆ ಸಂಚಾರದ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದಾಗ ಪಿಎಸ್ ಐ ಬಾಷುಮಿಯಾ ಕೊಂಚೂರ್ ಮಾತನಾಡಿ ಈಗಾಗಲೇ ಸಂಚಾರದ ಸಮಸ್ಯೆ ಬಗ್ಗೆ ಸೂಕ್ತವಾದ ಕ್ರಮವನ್ನು ಕೈಗೊಂಡಿದ್ದೇವೆ. ಇದಕ್ಕೆ ಅಂಗಡಿಯ ಮಾಲೀಕರು ಹಾಗೂ ವ್ಯಾಪಾರಸ್ಥರು ಇಲಾಖೆಗೆ ಸಹಕರಿಸಬೇಕು ಎಂದರು. ಪುರಸಭೆಯವರು ತಳುವ ಗಾಡಿ (ಬಂಡಿಗಳಿಗೆ) ನಿಲ್ಲಿಸಲು ಸ್ಥಳಾವಕಾಶ ಕಲ್ಪಿಸಿಕೊಡಬೇಕು, ತಳ್ಳುವ ಗಾಡಿಗಳಿಂದ ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಹುಸಾಮೋದ್ದಿನ ಬಾಬಾ, ಇಓ ಅಕ್ರಂಪಾಶಾ ಹಾಗೂ ಪಟ್ಟಣದ ವ್ಯಾಪಾರಸ್ಥರು ಇದ್ದರು.