ಜಿಲ್ಲೆಯಲ್ಲಿ ಮಾರ್ಚ 3 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆ
ಧಾರವಾಡ,ಫೆ27: ರಾಷ್ಟ್ರೀಯ ಲಸಿಕಾ ದಿನ ಪಲ್ಸ್ ಪೆÇೀಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ನಿಗಧಿತ ಗುರಿಯನ್ನು ಶೇ. 100 ರಷ್ಟು ಸಾಧಿಸಲು ಅಗತ್ಯವಿರುವ ಕ್ರೀಯಾ ಯೋಜನೆ ಹಾಗೂ ಸಿದ್ಧತೆಗಳನ್ನು ಆಯೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇತರ ಇಲಾಖೆಗಳ ಸಹಯೋಗದಲ್ಲಿ ಯಶಸ್ವಿಯಾಗಿ ಸಂಘಟಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ 2024ನೇ ಸಾಲಿನ ಪಲ್ಸ್ ಪೆÇೀಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಪಲ್ಸ್ ಪೆÇೀಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಲು ಗ್ರಾಮ ಪಂಚಾಯತಿ, ನಗರಸಭೆ, ಪುರಸಭೆ, ವಿವಿಧ ಇಲಾಖೆಗಳನ್ನು ಒಳಗೊಂಡು ಲಸಿಕಾ ದಿನದ ಪ್ರಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಾರ್ಚ್ 3 ರಂದು ಬೂತ್‍ಗಳಲ್ಲಿ, ಅಂಗನವಾಡಿ ಕೇಂದ್ರಗಳಲ್ಲಿ, ಸಾರ್ವಜನಿಕ ಸ್ಥಳಗಳಾದ ಜಾತ್ರೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಸಂತೆಗಳಲ್ಲಿ ಪಲ್ಸ್ ಪೆÇೀಲಿಯೋ ಹನಿಯನ್ನು ಐದು ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತದೆ. ನಂತರ ಮಾರ್ಚ್ 4, 5 ಮತ್ತು 6 ರಂದು ಎರಡನೇ ಸುತ್ತಿನಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡುವ ಮೂಲಕ ಮಕ್ಕಳಿಗೆ ಪಲ್ಸ್ ಪೆÇೀಲಿಯೋ ಲಸಿಕೆಯನ್ನು ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ರಾಷ್ಟ್ರೀಯ ಪಲ್ಸ್ ಪೆÇೀಲಿಯೋ ಕಾರ್ಯಕ್ರವನ್ನು ಯಶಸ್ವಿಗೊಳಿಸಲು ಶಾಲಾ ಶಿಕ್ಷಣ ಇಲಾಖೆ, ಗ್ರಾಮೀಣ ಅಭಿವೃಧ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಹಕಾರ ನೀಡಿ, ಸಮನ್ವಯ ಸಾಧಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ.ಅವರು ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಸಾಲಿಗಿಂತ ಪ್ರಸಕ್ತ ಸಾಲಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶೇ. 100 ರಷ್ಟು ಗುರಿ ಸಾಧಿಸಲು ಕ್ರಮ ವಹಿಸಲಾಗಿದೆ. ಸಾರ್ವಜನಿಕರಲ್ಲಿ ಗ್ರಾಮ ಪಂಚಾಯತಿಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಾಟೀಲ ಶಶಿ ಅವರು ಸ್ವಾಗತಿಸಿದರು. ಜಿಲ್ಲಾ ಆರ್‍ಸಿಎಚ್‍ಓ ಅಧಿಕಾರಿ ಡಾ. ಸುಜಾತಾ ಹಸವಿಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪಲ್ಸ್ ಪೋಲಿಯೋ ಕಾರ್ಯಕ್ರಮದ ಆಯೋಜನೆ ಕುರಿತು ಸಭೆಯಲ್ಲಿ ವಿವರಿಸಿದರು.
ಜಿಲ್ಲಾಧಿಕಾರಿಗಳು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಸಭೆಯಲ್ಲಿ ಬಿಡಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪಾ ಗಾಬಿ, ಆರೋಗ್ಯ ಇಲಾಖೆಯ ಎಲ್ಲ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ತಾಲೂಕು ಮುಖ್ಯ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.