ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕೋಲಾರ:ಸೆ,೧೬- ಕೋಲಾರ ಜಿಲ್ಲಾ ಕನಕ ನೌಕರರ ಸಂಘ ಮತ್ತು ಕೋಲಾರ ಜಿಲ್ಲಾ ಕುರುಬರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ-೨೦೨೪ ರನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ(ಬೈರತಿ) ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಜಿಲ್ಲೆಯ ಕುರುಬ ಸಮಾಜದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಶೇಕಡ ೯೦% ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಧನ ಸಹಾಯ ಮೂಲಕ ಪುರಸ್ಕರಿಸಿ ಗೌರವಿಸಿ ಮಾತನಾಡಿದರು.
ಕಾಗಿನೆಲೆ ಕನಕ ಗುರು ಪೀಠದ ಹೂಸದುರ್ಗ ಶಾಖಾ ಮಠದ ಪೀಠಾಧಿಪತಿಗಳಾದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು
ರಾಜ್ಯ ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದಹೆಚ್.ಎಂ.ರೇವಣ್ಣ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದಕೆ.ವಿ.ಪ್ರಭಾಕರ್, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಬಿ.ಕೆ.ರವಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌದರಿ, ಮಾಜಿ ಸಚಿವರಾದ ವರ್ತೂರ್ ಪ್ರಕಾಶ್, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್, ಕೋಲಾರ ತಾಲ್ಲೂಕು ತಹಶಿಲ್ದಾರ ಡಾ.ಎನ್.ನಯನ, ರಾಜ್ಯ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಜಿಲ್ಲಾ ಕುರುಬರಸಂಘದ ಅಧ್ಯಕ್ಷರಾದ ತಂಬಳ್ಳಿ ಮುನಿಯಪ್ಪ, ಸಂಘದ ಪದಾಧಿಕಾರಿಗಳು,ಸಮಾಜದ ಗಣ್ಯರು ಹಾಗೂ ಬಂಧುಗಳು ಉಪಸ್ಥಿತರಿದ್ದರು