ಬಿಜೆಪಿ ರೈತ ಮೋರ್ಚಾ ಬೈಠಕ ಅಂತ್ಯ
ಬೀದರ್:ಫೆ.26: ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀ ಗುರುಲಿಂಗನ ಗೌಡ ರವರು ಗ್ರಾಮ ಪರಿಕ್ರಮ ಯಾತ್ರೆ ಪ್ರಯುಕ್ತ ಬೀದರ್ ಜಿಲ್ಲೆಗೆ ಭೇಟಿ ನೀಡಿದರು,
ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ರೈತ ಮೋರ್ಚಾ ಜಿಲ್ಲಾ ಮಂಡಲ ಪದಾಧಿಕಾರಿಗಳ ಬೈಠಕ್ ನ್ನು ತೆಗೆದುಕೊಂಡರು.
ಬೈಠಕ್ ಮೊದಲು ಪ್ರಧಾನಿ ಮೋದಿ ಜೀ ರವರ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಕುಶಾಲ ಪಾಟೀಲ ಗಾದಗಿ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಸಂಜು ಪಾಟೀಲ್ ಜ್ಯಾಂತಿ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಅಶೋಕ್ ಪಾಟೀಲ,ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಹರಕಂಚಿ, ಜಿಲ್ಲಾ ಪದಾಧಿಕಾರಿಗಳು,ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.