ಪೆÇಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: 3000 ಮಂದಿ ಹಾಜರು
ಸಂಜೆವಾಣಿ ವಾರ್ತೆ
ಚಾಮರಾಜನಗರ, ಫೆ.26- ನಗರದ 7 ಪರೀಕ್ಷಾ ಕೇಂದ್ರದಲ್ಲಿ ನಡೆದ ಸಿವಿಲ್ ಪೆÇಲೀಸ್ ಕಾನ್ಸ್‍ಟೇಬಲ್ ಪರೀಕ್ಷೆಯಲ್ಲಿ ಮೂರುವರೆ ಸಾವಿರಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.
ಖಾಲಿ ಇರುವ 1137 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಮೂರುವರೆ ಸಾವಿರಕ್ಕೂ ಅಧಿಕ ಮಂದಿ ಪುರುಷ- ಮಹಿಳಾ ಅಭ್ಯರ್ಥಿಗಳು ಹಾಜರಾಗಿದ್ದರು. ಪರೀಕ್ಷಾ ಕೇಂದ್ರದ ಪ್ರವೇಶಕ್ಕೂ ಮುನ್ನ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಯಿತು.
ಯಾವುದೇ ರೀತಿಯ ಸ್ಮಾರ್ಟ್ ಗ್ರಾಜೆಟ್, ಫೆÇೀನ್‍ಗಳು ಕೊಂಡೊಯ್ಯದಂತೆ ಕಟ್ಟುನಿಟ್ಟಿನ ತಪಾಸಣೆ ಮಾಡಿಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಹದ್ದಿನ ಕಣ್ಣಿಡಲಾಗಿತ್ತು. ಪಾರದರ್ಶಕ ಪರೀಕ್ಷೆ ನಡೆಸುವ ಸಲುವಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಎಸ್ಪಿ ಪದ್ಮಿನಿ ಸಾಹು, ಎಎಸ್ಪಿ ಉದೇಶ್ ಭೇಟಿ ನೀಡಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ತಪಾಸಣೆ ನಡೆಸಿದರು.