ಫೆ‌೨೮ ರಂದು ರೈತರಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ

ಸಂಜೆವಾಣಿ ವಾರ್ತೆ
ದಾವಣಗೆರೆ.ಫೆ.26: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಯನ್ನು ರದ್ದುಪಡಿಸಬೇಕು, ಸಂಪೂರ್ಣವಾಗಿ ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಾದ್ಯಂತ ಇದೇ ಫೆ.೨೮ ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಸೇನೆಯ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ್ ಮಾತನಾಡಿ, ಅಂದು ಬೆಳಿಗ್ಗೆ ೧೧.೩೦ ರಿಂದ ಜಯದೇವ ಸರ್ಕಲ್ ನಿಂದ  ಬೈಕ್ ಮೂಲಕ ಡಿಸಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಲಾಗುವುದು ಎಂದರು.ರೈತರ ಚಳುವಳಿಯಲ್ಲಿ ಹತ್ತಿಕ್ಕುವಂತಹ ಕೆಲಸ ಮಾಡಬಾರದು. ಯುವ ರೈತ ಶುಭಕರನ್ ಸಿಂಗ್ ಹತ್ಯೆ ಮಾಡಿರುವನದನು ಸೇನೆ ಖಂಡನೆ ಮಾಡುವುದರ ಮೂಲಕ ಮೃತ ರೈತ ಕುಟುಂಬಕ್ಕೆ ಸಾಂತ್ವನ ಹೇಳುವುದು, ಸಂಪೂರ್ಣವಾಗಿ ರೈತರ ಸಾಲವನ್ನು ಮನ್ನಾ ಮಾಡಬೇಕು, ಬಗರ್ ಹುಕುಂ ಸಾಗುವಳಿದಾರರಿಗೆ ಸಮಿತಿ ರಚನೆ ಮಾಡಬೇಕು ಕೂಡಲೇ ಹಕ್ಕು ಪತ್ರ ಕೊಡಬೇಕು ಮತ್ತು ಎಲ್ಲಾ ತಾಲ್ಲೂಕುಗಳಲ್ಲಿ ಬಗರ್ ಹುಕುಂ ಮೀಟಿಂಗ್ ನಡೆಸಬೇಕು ಎಂದು ಆಗ್ರಹಿಸಿದರು.ಕರ್ನಾಟಕ ರಾಜ್ಯ ಸರ್ಕಾರ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ರೂ:35000-00 ಘೋಷಣೆ ಮಾಡಬೇಕು ಮತ್ತು ಬೆಳೆ ವಿಮೆಯನ್ನು ಬಿಡುಗಡೆ ಮಾಡಬೇಕು, ಬ್ಯಾಂಕುಗಳ ರೈತರ ಮೇಲೆ ದೌರ್ಜನ್ಯದಿಂದ ಬಲವಂತವಾಗಿ ಸಾಲ ವಸೂಲು ಮಾಡಬಾರದು, ಗ್ರಾಮ ಪಂಚಾಯತಿಗೊಂದು ಗೋಶಾಲೆ ತೆರೆಯಬೇಕು. ನೀರು, ಮೇವು, ಒದಗಿಸಬೇಕು, ರೈತರ ಪಂಪ್‌ಸೆಟ್‌ಗಳಿಗೆ ನಿರಂತರವಾಗಿ ಹಗಲು 7 ತಾಸು ವಿದ್ಯುತ್ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದರು.ಗೋಷ್ಠಿಯಲ್ಲಿ ಸೇನೆಯ ಪದಾಧಿಕಾರಿಗಳಾದ ಚಿಕ್ಕಬೂದಿಹಾಳ್, ಕೆಂಚಮ್ಮನಹಳ್ಳಿ ಹನುಮಂತಪ್ಪ, ಕಿತ್ತೂರು ಹನುಮಂತಪ್ಪ, ಸುನೀಲ್, ಮಲ್ಲಿಕಾರ್ಜುನ್  ಇದ್ದರು.