ರಾಜಾ ವೆಂಕಟಪ್ಪ ನಾಯಕ್ ನಿಧನ:ಮಲ್ಲಿಕಾರ್ಜುನ ಖರ್ಗೆ ಸಂತಾಪ
ಕಲಬುರಗಿ:ಫೆ.25:ಸುರಪುರ ಶಾಸಕ ಹಾಗೂ ಉಗ್ರಾಣ ನಿಗಮದ ಅಧ್ಯಕ್ಷರಾದ ರಾಜಾ ವೆಂಕಟಪ್ಪ ನಾಯಕ್ (68) ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಂತಾಪ ಸೂಚಿಸಿದ್ದಾರೆ.
ಕುಟಂಬ ವರ್ಗದವರಿಗೆ ಕಳಿಸಿರುವ ತಮ್ಮ ಸಂತಾಪ ಸೂಚನಾ ಪತ್ರದಲ್ಲಿ ಶ್ರೀಯುತರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿರುವ ಖರ್ಗೆ ಅವರು ರಾಜಾ ವೆಂಕಟಪ್ಪ ನಾಯಕ್ ಅವರ ನಿಧನದಿಂದಾಗಿ ಕಲಬುರಗಿ ವಿಭಾಗ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರಿಗೆ ತುಂಬಲಾಗದ ನಷ್ಠವಾಗಿದೆ ಎಂದಿದ್ದಾರೆ.