ರಾಜಾ ವೆಂಕಟಪ್ಪನಾಯಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶ
ಯಾದಗಿರಿ : ಫೆ. 25 : ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷರಾದ ಶ್ರೀ ರಾಜಾ ವೆಂಕಟಪ್ಪನಾಯಕ ಅವರು 2024ರ ಫೆಬ್ರವರಿ 25 ರಂದು ನಿಧನರಾಗಿದ್ದರ ಹಿನ್ನೆಲೆ ಅವರ ನಿಧನಕ್ಕೆ ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ.
ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ ಎಂದು ಸಿಆಸುಇ (ರಾಜ್ಯ ಶಿಷ್ಠಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ-1 ಪಿಎನ್ ನಾಗ ಪ್ರಶಾಂತ್ ಅವರು ತಿಳಿಸಿದ್ದಾರೆ.