ರಾಜಾ ವೆಂಕಟಪ್ಪ ನಾಯಕ ಅಗಲಿಕೆ ಅಘಾತ ಉಂಟು ಮಾಡಿದೆ: ಸಚಿವ ಶರಣಬಸಪ್ಪ ದರ್ಶನಾಪೂರ
ಯಾದಗಿರಿ : ಫೆ. 25 : ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷರಾದ ಶ್ರೀ ರಾಜಾ ವೆಂಕಟಪ್ಪನಾಯಕ (67) ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ನಿಧನರಾದ ಸಂಗತಿ ತಿಳಿದು ತುಂಬ ಆಘಾತ ಉಂಟುಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕರ ಉದ್ದಿಮೆಗಳ ಖಾತೆ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಅಗಲಕೆಯಿಂದ ಆದ ನಷ್ಟವನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.