5 ಕೋಟಿ ವೆಚ್ಚದಲ್ಲಿ ಅಲೆಮಾರಿ ಭವನ ನಿರ್ಮಾಣಸಚಿವ ನಾಗೇಂದ್ರ ಭರವಸೆ
(ಸಂಜೆವಾಣಿ ವಾರ್ತೆ)
ಬಳ್ಳಾರಿ:ಫೆ,25-  ಜಿಲ್ಲೆಯಲ್ಲಿನ ಅಲೆಮಾರಿ ಜನಾಂಗದವರ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆಳಿಗಾಗಿ 5 ಕೋಟಿ ರೂ.ವೆಚ್ಚದಲ್ಲಿ ಸರ್ಕಾರದಿಂದ 1 ಎಕರೆ ಸರ್ಕಾರಿ ಸ್ಥಳದಲ್ಲಿ
ಅಲೆಮಾರಿ ಭವನ ನಿರ್ಮಿಸಿಕೊಡುವುದಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ  ಸಚಿವ ಬಿ.ನಾಗೇಂದ್ರ  ಭರವಸೆ ನೀಡಿದ್ದಾರೆ.
ನಗರದ  ವಾಲ್ಮೀಕಿ ಭವನದಲ್ಲಿ ನಿನ್ನೆ  ಕರ್ನಾಟಕ ರಾಜ್ಯ ಎಸ್.ಸಿ., ಎಸ್.ಟಿ., ಅಲೆಮಾರಿ ಬುಡಕಟ್ಟು ಮಹಾಸಭಾ  ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ‘ಅಲೆಮಾರಿ ಜಾಗೃತಿ ಸಮಾವೇಶ’ ಉದ್ಘಾಟಿಸಿ ಮಾತನಾಡುತ್ತಿದ್ದರು.
ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ಎಲ್ಲೆಲ್ಲಿ ಸರ್ಕಾರದ ಜಾಗ ಇರುತ್ತೋ ಅಲ್ಲಲ್ಲಿ ಗುರುತಿಸಿ ನಿವೇಶ ಒದಗಿಸುವುದಾಗಿ. ವಸತಿ ಇದ್ದು, ಮನೆ ಕಟ್ಟಲು ಸಾಧ್ಯವಾಗದೇ ಇರುವವರಿಗೆ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಹೇಳಿದರು. ಸಂವಿದಾನಶಿಲ್ಪಿ ಅಂಬೇಡ್ಕರ್ ಅವರ ಆಶಯದಂತೆ ಸರ್ಕಾರದಿಂದ ಅಲೆಮಾರಿಗಳಿಗೆ ಬೇಕಾದ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸುತ್ತೇನೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಶಾಸಕರಾದ ಜೆ.ಎನ್.ಗಣೇಶ್, ನಾರಾ ಭರತ್ ರೆಡ್ಡಿ, ಮಾಜಿ ಸಂಸದ ವಿ.ಎಸ್ ಉಗ್ರಪ್ಪ,  ಮೇಯರ್ ಬಿ.ಶ್ವೇತಾ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲ್ಲುಕಂಬ ಪಂಪಾಪತಿ ಮೊದಲಾದವರು ಇದ್ದರು.