ಭಾರಿ ಮಳೆಯಿಂದ ಅಪಾರ ಪ್ರಮಾಣದ ತೊಗರಿ ಬೆಳೆ ಹಾನಿ
ವಾಡಿ,ಸೆ.15-ತೊಗರಿ ನಾಡು ಎಂದು ಖ್ಯಾತಿ ಪಡೆದ ಕಲಬುರಗಿ ಜಿಲ್ಲೆಯಲ್ಲಿ ಈಚೆಗೆ ಸುರಿದ ಭಾರಿ ಮಳೆಗೆ ತೊಗರಿ ಬೆಳೆ ಕೊಚ್ಚಿ ಹೋಗಿ ರೈತರು ಕಂಗಾಲಾಗಿದ್ದಾರೆ.
ಭಾರಿ ಮಳೆಯಿಂದಾಗಿ ತೊಗರಿ ಬೆಳೆಯಲ್ಲಿ ನೀರು ನಿಂತು ನಾಟಿ ರೋಗದಿಂದ ಬೆಳೆ ನಾಶವಾಗಿದೆ. ಚಿತ್ತಾಪುರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ತೊಗರಿ ಹೊಲಗಳ್ಳಲಿ ನೀರು ನಿಂತು ಅಪಾರ ಪ್ರಮಾಣದ ಬೆಳ್ಳೆ ನಾಶವಾಗಿದೆ.
ಬೆಳೆ ನಾಶದಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಹಾನಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಮತ್ತು ಇದೇ ತಿಂಗಳು 17 ರಂದು ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬೆಳೆ ಹಾನಿ ಬಗ್ಗೆ ಚರ್ಚೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ.