ಬಸವಕಲ್ಯಾಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಬಸವಕಲ್ಯಾಣ ಸೆ 15: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಇಲ್ಲಿನ ಅನುಭವ ಮಂಟಪದಿಂದ ಹಳ್ಳಿಕೇಡ( ಕೆ) ಕಿಣ್ಣಿ ಸಡಕ್ ವರಗೆ 45 ಕಿಮೀ ಮಾನವ ಸರಪಳಿ ರಚಿಸಲಾಯಿತು.
ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ .ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಡಾ. ಬಸವಲಿಂಗ ಪಟ್ಟದ್ದೇವರು, ಗುರು ಬಸವಪಟ್ಟದ್ದೇವರು ಸಾನಿಧ್ಯ ವಹಿಸಿದರು.ಪೌರಾಡಳಿತ ಹಜ್‍ಖಾತೆ ಸಚಿವ ರಹೀಮ ಖಾನ್,ವಿಧಾನ ಪರಿಷತ್ ಸದಸ್ಯ ಎಂ.ಜಿ ಮೂಳೆ ಉಪಸ್ಥಿತರಿದ್ದರು. ಬಸವಕಲ್ಯಾಣ ಶಾಸಕ ಶರಣು ಸಲಗರ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಎಸ್ಪಿ ಪ್ರದೀಪ ಗುಂಟಿ ,ಜಿಪಂ ಸಿಇಒ ಡಾ. ಗಿರೀಶ ಬದೋಲೆ,ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಸಿಂಧು ಎಚ್ ಎಸ್ ಸೇರಿದಂತೆ, ಜನಪ್ರತಿನಿಧಿಗಳು, ಅಧಿಕಾರಿಗಳು,ಶಾಲೆಯ ಮಕ್ಕಳು,ಸಂಘಸಂಸ್ಥೆಗಳ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.