ಆಲಮಟ್ಟಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಮಾನವ ಸರಪಳಿ
ವಿಜಯಪುರ, ಸೆ.15:ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಲಮಟ್ಟಿಯಲ್ಲಿ ಭಾನುವಾರ ಜಿಲ್ಲಾಧಿಕಾರಿ ಟಿ. ಭೂಬಾಲನ್ ನೇತೃತ್ವದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಗಮನ ಸೆಳೆಯಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಸೇರಿದಂತೆ ಶಾಲಾ ವಿದ್ಯಾರ್ಥಿಗಳು,ಮಹಿಳಾ ಸ್ವಸಹಾಯದ ಸಂಘಗಳು ವಿವಿಧ ಸಂಘ ಸಂಸ್ಥೆಗಳು, ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.