ತಾಲೂಕು ಮಟ್ಟದ ಕ್ರೀಡಾಕೂಟ
ವಿಜಯಪುರ,ಸೆ.15:ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಹಾಗೂ ವಿಜಯಪುರ ನಗರ ವಲಯ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಾರ್ಯಾಲಯ, ಹಾಗೂ ಕಪಿಲ್ ಪಬ್ಲಿಕ್ ಸ್ಕೂಲ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ತಾಲೂಕಾ ಮಟ್ಟದ ಕ್ರೀಡಾಕೂಟ ಏರ್ಪಡಿಸಲಾಗಿತ್ತು.
ವಿಜಯಪುರ ನಗರ ವಲಯ ಕ್ಷೇತ್ರ ಶಿಕ್ಷಣಧಿಕಾರಿ ಬಸವರಾಜ ತಳವಾರ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮೈಫೂಜಅಲಿ ಬಾಗವಾನ, ಡಿ.ಜಿ.ಮುಲ್ಲಾ, ಜುಬೇರ ಕೆರೂರ ಸೇರಿದಂತೆ ಕಪಿಲ್ ಸ್ಕೂಲ್‍ನ ಆಡಳಿತ ಮಂಡಳಿಯ ಪದಾಧಿಕಾರಿಗಳು, ಮುಖ್ಯ ಗುರುಗಳು, ಹಾಗೂ ಬೋಧಕ- ಬೋಧಕÉೀತರ ಸಿಬ್ಬಂದಿ ವರ್ಗ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.