ಕರ್ನಾಟಕ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ
ಬೀದರ್: ಸೆ.15:ಜಗತ್ತಿನಲ್ಲಿ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಮೂರನೇ ಸ್ಥಾನದಲ್ಲಿದೆ ಎಂದು ಕಲಬುರಗಿಯ ಶ್ರೀಮತಿ ವೀರಮ್ಮ ಗಂಗಾಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ.ಪ್ರೇಮಚಂದ್ ಚವ್ಹಾಣ ಅವರು ಪ್ರತಿಪಾದಿಸಿದರು.
ನಗರದ ಕರ್ನಾಟಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ಹಿಂದಿ ದಿನಾಚರಣೆ ನಿಮಿತ್ಯ ಅಂತರ ಕಾಲೇಜು ಪ್ರಬಂಧ ಸ್ಪರ್ಧೆ ಹಾಗೂ ವಿಶೇಷ ಅತಿಥಿ ಉಪನ್ಯಾಸವನ್ನೂ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಅವರು ಹಿಂದಿ ಭಾಷೆಯ ಮಹತ್ವ ಮತ್ತು ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಪ್ರಭಾವದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಗಡಿಭಾಗದಲ್ಲಿ ಹಿಂದಿ ಭಾಷೆಯು ಪರಸ್ಪರ ಸಂಪರ್ಕ ಸಂವಹನಕ್ಕೆ ಕಾರಣವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಪ್ರಾಂಶುಪಾಲರಾದ ಪೆÇ್ರ. ಅನಿಲಕುಮಾರ ಚಿಕ್ಕಮಣ್ಣೂರ ವಹಿಸಿದರು. ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ಡಾ.ಗೀತಾ ಪೆÇೀಸ್ತೆ, ಕಲಾ ವಿಭಾಗದ ಸಂಯೋಜಕರಾದ ಡಾ. ಶಶಿಧರ ಪಾಟೀಲ್, ಸಹಾಯಕ ಪ್ರಾಧ್ಯಾಪಕ ಡಾ.ಸಿರಾಜ್ ಸೇರಿದಂತೆ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಡಾ. ಗೀತಾ ಪೆÇೀಸ್ತೆ ಸ್ವಾಗತಿಸಿದರು. ವಿದ್ಯಾರ್ಥಿನಿ ಜೈನಬ್ ಮತ್ತು ಮೊಹಮ್ಮದಿ ಬೇಗಂ ನಿರೂಪಿಸಿದರೆ ಪ್ರಾಧ್ಯಾಪಕ ಡಾ. ಸಿರಾಜ್ ವಂದಿಸಿದರು.