50 ಸಾವಿರ ಮಹಿಳೆಯರ ಬಿಜೆಪಿ ಸದಸ್ಯತ್ವ ಗುರಿ
ಬೀದರ್: ಸೆ.15:ಜಿಲ್ಲೆಯಲ್ಲಿ ಹೊಸದಾಗಿ 50 ಸಾವಿರ ಮಹಿಳೆಯರ ಬಿಜೆಪಿ ಸದಸ್ಯತ್ವ ಮಾಡಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಉಲ್ಲಾಸಿನಿ ವಿಕ್ರಮ ಮುದಾಳೆ ಹೇಳಿದರು.
ನಗರದ ನೌಬಾದನ ಪಕ್ಷದ ಜಿಲ್ಲಾ ಘಟಕದ ಕಚೇರಿಯಲ್ಲಿ ಶುಕ್ರವಾರ ನಡೆದ ಸದಸ್ಯತ್ವ ಅಭಿಯಾನ ಕುರಿತ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ತಾಲ್ಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಸದಸ್ಯತ್ವ ಅಭಿಯಾನದ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಮಹಿಳೆಯರು ಮೊಬೈಲ್ ಸಂಖ್ಯೆ 8800002024 ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಪಕ್ಷದ ಸದಸ್ಯತ್ವ ನೋಂದಣಿ ಮಾಡಿಸಬೇಕು. ಸದೃಢ ರಾಷ್ಟ್ರ ಕಟ್ಟಲು ಕೈಜೋಡಿಸಬೇಕು ಎಂದು ಹೇಳಿದರು.
ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆ ಕುರಿತು ಮೋರ್ಚಾ ಕಾರ್ಯಕರ್ತೆಯರು ಮಹಿಳೆಯರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ ಉದ್ಘಾಟಿಸಿ ಮಾತನಾಡಿ, ಸದಸ್ಯತ್ವ ಅಭಿಯಾನದ ಯಶಸ್ವಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ,
ಮುಖಂಡರಾದ ವಿಕ್ರಮ ಮುದಾಳೆ, ರಾಜಕುಮಾರ ಪಾಟೀಲ ನ್ಯಾಮತಾಬಾದ್, ಮಹಿಳಾ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಹೇಮಾ ತುಕ್ಕಾರೆಡ್ಡಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ವಿಜಯಲಕ್ಷ್ಮಿ ಕೌಟಗೆ, ದೈವಶೀಲಾ ಮದನೆ, ಮತ್ತಿತರರು ಇದ್ದರು.