ಹಿಂದಿ ದಿವಸ್ ಆಚರಣೆ ವಿರುದ್ಧ ಪ್ರತಿಭಟನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ.15:- ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಗುಂಡ್ಲುಪೇಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಐಬಿ ವೃತ್ತದಿಂದ ಸಾರಿಗೆ ಬಸ್ ನಿಲ್ದಾಣಸತನಕ ಪ್ರತಿಭಟನ ಮೆರವಣಿಗೆ ನಡೆಸಿದ ಕರವೇ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು.
ಬಳಿಕ ಹಳೇ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಕೇಂದ್ರ ಸರ್ಕಾರ ಹಿಂದಿ ದಿವಸ್‍ಆಚರಣೆ ಮಾಡುವ ನಡೆ ಸರಿಯಲ್ಲ. ಭಾರತ ಎಂದರೆ ಅನೇಕ ಭಾμÉಗಳು, ಸಾಂಸ್ಕøತಿಕ ಹಿನ್ನೆಲೆ, ಆಚಾರ ವಿಚಾರ ಒಳಗೊಂಡಿದ್ದು, ಹಿಂದಿ ಭಾಷಿಕರದೇಶವಲ್ಲ. ಕನ್ನಡಿಗರ ಮೇಲೆ, ತಮಿಳರು, ಮಲೆಯಾಳಿಗಳು, ತೆಲುಗು ಭಾಷಿಕರ ಮೇಲೆ ಉತ್ತರ ಭಾರತದ ಕೆಲವೇ ರಾಜ್ಯಗಳಲ್ಲಿ ಮಾತನಾಡುವ ಹಿಂದಿ ಭಾμÉಯನ್ನು ಬಲವಂತವಾಗಿ ನಮ್ಮ ಮೇಲೆ ಹೇರಿಕೆ ಮಾಡುವ ಮೂಲಕ ದಬ್ಬಾಳಿಕೆ ಮಾಡುವುದನ್ನು ನಾವು ಸಹಿಸುವುದಿಲ್ಲ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರ ನಮ್ಮ ಮೇಲೆ ಪ್ರತಿ ಹಂತದಲ್ಲಿಯೂ ಹಿಂದಿ ಹೇರುವ ಮೂಲಕ ಒತ್ತಡ ಹೇರುತ್ತಿದೆ. ಹಿಂದಿ ಬಾರದವರಿಗೆಕೇಂದ್ರ ಸರ್ಕಾರದ ನೌಕರಿಗಳಲ್ಲಿ ಕಡೆಗಣಿಸಲಾಗುತ್ತಿದೆ, ಕೇಂದ್ರ ಸರ್ಕಾರದ ಉದ್ಯಮಗಳಲ್ಲಿ ಆಯಾ ಸ್ಥಳೀಯ ಪ್ರಾದೇಶಿಕ ಭಾμÉಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು.