ರಾಷ್ಟಿçÃಯ ಲೋಕ ಅದಾಲತ್ ಯಶಸ್ವಿ
ಸಂಜೆವಾಣಿ ವಾರ್ತೆ,
ವಿಜಯಪುರ,ಸೆ.೧೫: ಜಿಲ್ಲೆಯ ೮ ದಂಪತಿಗಳ ಕೌಟುಂಬಿಕ ಪ್ರಕರಣಕ್ಕೆ ಸಂಬAಧಿಸಿದAತೆ ರಾಜಿ ಸಂಧಾನದ ಮೂಲಕ ಸಮಸ್ಯೆಯನ್ನು ಇತ್ಯರ್ಥಪಡಿಸುವ ಮೂಲಕ ಜಿಲ್ಲೆಯಲ್ಲಿ ನಡೆದ ರಾಷ್ಟಿçÃಯ ಲೋಕ್ ಅದಾಲತ್ ಕಾರ್ಯಕ್ರಮ ಯಶಸ್ವಿಯಾಗಿದೆ.
ಜಿಲ್ಲೆಯಲ್ಲಿ ನಡೆದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗಿದ್ದ ಹಲವಾರು ಪ್ರಕರಣಗಳ ಪೈಕಿ ಒಟ್ಟು ೧೧೬೨೩ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು. ಆಸ್ತಿ ವಿಭಾಗ ಕೋರಿದ ೧೪೫ ದಾವೆಗಳು, ೧೪೨ ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ ೧೭೩ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ೪೬ ಪ್ರಕರಣಗಳು, ರಾಜಿಯಾಗಬಹುದಾದ ೮೦ ಕ್ರಿಮಿನಲ್ ಪ್ರಕರಣಗಳು ಹಾಗೂ ೭೭ ಅಮಲ್ಜಾರಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.
ಪ್ರಧಾನ ಕೌಟುಂಬಿಕ ನ್ಯಾಯಾಲಯ ಹಾಗೂ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯ, ಸಿಂದಗಿ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಲಯಗಳಲ್ಲಿ ೮ ದಂಪತಿಗಳನ್ನು ರಾಜಿ ಸಂಧಾನ ಮಾಡಿಸಿ ಒಂದುಗೂಡಿಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷÀ ಶಿವಾಜಿ ಅನಂತ ನಲವಡೆ, ಅವರು ಈ ಸಂದರ್ಭದಲ್ಲಿ ತಿಳುವಳಿಕೆ ನೀಡಿ ಕಕ್ಷಿದಾರರು ಬಹಳ ವರ್ಷ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ತಮ್ಮ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರೆ ಹಣ ಮತ್ತು ಸಮಯ ಎರಡೂ ಉಳಿತಾಯವಾಗಲಿದ್ದು, ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದ್ದಾರೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಸಾಯಬಣ್ಣ ಹಾಗರಗಿ ಅವರು ಮಾತನಾಡಿ, ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಸಾರ್ವಜನಿಕರು ಶೀಘ್ರ ನ್ಯಾಯ ಪಡೆದುಕೊಂಡು ಪರಸ್ಪರ ಸೌರ್ಹಾದತೆಯಿಂದ ಸಮಾಜದಲ್ಲಿ ಜೀವನ ಸಾಗಿಸಬೇಕೆಂದು ಸಲಹೆ ನೀಡಿದರು.
ಈ ರಾಷ್ಟ್ರೀಯ ಜನತಾ ನ್ಯಾಯಾಲಯದ ಯಶಸ್ವಿಗೆ ಎಲ್ಲಾ ವಕೀಲರು, ಕಕ್ಷಿದಾರರು ಹಾಗೂ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಉತ್ತಮವಾಗಿ ಸಹಕರಿಸಿದ್ದು ವಿಶೇಷವಾಗಿತ್ತು. ಈ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸಹಭಾಗಿಯಾದ ಸಾರ್ವಜನಿಕರಿಗೆ, ಕಕ್ಷಿದಾರರಿಗೆ, ಪಕ್ಷಗಾರರ ಪರ ವಕೀಲರುಗಳಿಗೆ ಹಾಗೂ ಪರೋಕ್ಷ ಮತ್ತು ಪ್ರತ್ಯಕ್ಷವಾಗಿ ಸಹಕರಿಸಿದ ಎಲ್ಲರ ಸಹಕಾರಕ್ಕೆ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ, ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
