ರಾಜ್ಯದ ಮುಖ್ಯಮಂತ್ರಿಗಳ ಪ್ರವಾಸ
ಕಲಬುರಗಿ:ಸೆ.14:ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಸೆಪ್ಟೆಂಬರ್ 16 ರಂದು ಸೋಮವಾರ ಸಂಜೆ 4.10 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ನಂತರ ಅಂದು ಸಂಜೆ 4.15 ಗಂಟೆಗೆ ಕಲಬುರಗಿ ವಿಮಾನÀ ನಿಲ್ದಾಣದಿಂದ ರಸ್ತೆ ಮೂಲಕ ಕಲಬುರಗಿ ತಾಲೂಕಿನ ಕವಲಗಾ(ಕೆ) ಗ್ರಾಮಕ್ಕೆ ಪ್ರಯಾಣಿಸಿ, ಕಲವಗಾ(ಕೆ) ಗ್ರಾಮದ ಶ್ರೀ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಜಯಂತ್ಯೋತ್ಸವ ಸ್ವಾಗತ ಸಮಿತಿಯಿಂದ ಹಮ್ಮಿಕೊಳ್ಳಲಾದ ಶ್ರೀ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಪ್ರತಿಮೆ ಅನಾವರಣ ಹಾಗೂ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 6.45 ಗಂಟೆಗೆ ಕವಲಗಾ (ಕೆ) ಗ್ರಾಮದಿಂದ ರಸ್ತೆ ಮೂಲಕ ಕಲಬುರಗಿಗೆ ಆಗಮಿಸಿ ಕಲಬುರಗಿಯ ಐವಾನ್ ಶಾಹಿ ವಸತಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 17ರಂದು ಮಂಗಳವಾರ ಬೆಳಿಗ್ಗೆ 8.25 ಗಂಟೆಗೆ ಕಲಬುರಗಿ ನಗರದ ಎಸ್.ವಿ.ಪಿ. ವೃತ್ತದಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ್‍ರವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2024 ಅಂಗವಾಗಿ ಧ್ವಜಾರೋಹಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ, ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸುವರು.
ನಂತರ ಅಂದು ಸಂಜೆ 4 ಗಂಟೆಗೆ ಕಲಬುರಗಿ ಮಿನಿ ವಿಧಾನಸೌಧದ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜರುಗಲಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವರು. ನಂತರ ರಾತ್ರಿ 7 ಗಂಟೆಗೆ ಕಲಬುರಗಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.