ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕಲಬುರಗಿ:ಸೆ.14: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಸೆಪ್ಟೆಂಬರ್ 15 ರಂದು ಭಾನುವಾರ ರಾತ್ರಿ 7 ಗಂಟೆಗೆ ಬೆಂಗಳೂರಿನಿಂದ ಕಲಬುರಗಿಗೆ ಆಗಮಿಸಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕÀಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 16 ರಂದು ಸೋಮವಾರ ಮಧ್ಯಾಹ್ನ 3 ರಿಂದ ಸಂಜೆ 6.45 ಗಂಟೆಯವರೆಗೆ ಕಲಬುರಗಿ ಹಾಗೂ ಅಫಜಲಪುರದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 17 ರಂದು ಮಂಗಳವಾರ ಬೆಳಿಗ್ಗೆ 8.20 ರಿಂದ ಸಂಜೆ 4 ಗಂಟೆಯವರೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿಯ ಸಂಭಾಗಣದಲ್ಲಿ ಜರುಗಲಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವರು.