ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ
ಕಲಬುರಗಿ,ಸೆ.14-ಹೊಟ್ಟೆ ನೋವು ತಾಳದೆ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ವಿದ್ಯಾನಗರದಲ್ಲಿ ನಡೆದಿದೆ.
ಗುರುಬಸಪ್ಪ ಕುಂಬಾರ (83) ಆತ್ಮಹತ್ಯೆ ಮಾಡಿಕೊಂಡವರು.
ಕಳೆದ 4-5 ವರ್ಷಗಳಿಂದ ಹೊಟ್ಟೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಶಸ್ತ್ರ ಚಿಕಿತ್ಸೆಯೂ ಮಾಡಿಸಿಕೊಂಡಿದ್ದರು. ಆದರೂ ಗುಣಮುಖವಾಗಿರಲಿಲ್ಲ. ಇದರಿಂದ ನೊಂದು ಶುಕ್ರವಾರ ರಾತ್ರಿ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅವರ ಪುತ್ರ ವೀರಭದ್ರಪ್ಪ ಕುಂಬಾರ ಅವರು ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.