16ರಂದು 371( ಜೆ) ಕಲಂ ಸಾಧನೆ,ಸಮಸ್ಯೆ ವಿಚಾರಸಂಕಿರಣ
ಕಲಬುರಗಿ,ಸೆ 14: ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371ನೇ ಜೆ ಕಲಂ ಜಾರಿಯಾಗಿ 10 ವರ್ಷ ಗತಿಸಿರುವ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಗತಿ ಮತ್ತು ಸಂವಿಧಾನದ 371ನೇ ಜೆ ಕಲಂ ಸಾಧನೆ ಹಾಗೂ ಸಮಸ್ಯೆಗಳ ಕುರಿತು ಸೆ. 16 ರಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಹಾಗೂ ಶರಣ ಬಸವ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ವಿಚಾರ ಸಂಕಿರಣವನ್ನು ಅಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟ ಸಮಿತಿಯ ಗೌರವಾಧ್ಯಕ್ಷ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ತಿಳಿಸಿದ್ದಾರೆ.
ವಿದ್ಯಾ ಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರು ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಲಿದ್ದು, ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ಹಾಗೂ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಎಸ್. ಅವ್ವನವರು ಸಾನಿಧ್ಯವನ್ನು ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಬಿ.ಆರ್.ಪಾಟೀಲ ಉದ್ಘಾಟಿಸುವರು. ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ವಿಚಾರ ಸಂಕಿರಣದಲ್ಲಿ ಕಲ್ಯಾಣ ಕರ್ನಾಟಕದ ರಚನಾತ್ಮಕ ಪ್ರಗತಿಯ ಕುರಿತು 3 ಪ್ರಮುಖ ಉಪನ್ಯಾಸಗಳಿರಲಿವೆ. ಕನ್ನಡ ವಿಶ್ವವಿದ್ಯಾಲಯ ಹಂಪಿಯ ನಿವೃತ್ತ ಪ್ರಾಧ್ಯಾಪಕ ಪೆÇ್ರ. ಟಿ. ಆರ್. ಚಂದ್ರಶೇಖರ ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ಸಮಾವಲೋಕನ, ಪೆÇ್ರ.ಬಸವರಾಜ ಕುಮ್ನೂರ ಕಲ್ಯಾಣ ಕರ್ನಾಟಕದಲ್ಲಿ ಮಾನವ ಅಭಿವೃದ್ಧಿ ಹಾಗೂ ಡಾ. ರಜಾಕ ಉಸ್ತಾದ 371 ಜೆ ಕಲಂ ನ ಸಾಧನೆ ಮತ್ತು ಸಮಸ್ಯೆಗಳು ಕುರಿತು ವಿಚಾರಗಳನ್ನು ಮಂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.