ಟೆಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕಲಬುರಗಿ,ಸೆ 14: ಸಾರ್ವಜನಿಕ ಶಿಕ್ಷಣ ಇಲಾಖೆಯವತಿಯಿಂದ ಸೆ.6 ರಂದು ಆಯೋಜಿಸಿದ ಜಿಲ್ಲಾ ಮಟ್ಟದ ಟೆಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ನಗರದಎಸ್. ಆರ್. ಎನ್. ಮೆಹತಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಆಯ್ಕೆ ಪ್ರಕ್ರಿಯೆಯಲ್ಲಿ 14 ವರ್ಷದ ಒಳಗಿನ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನವನ್ನು, 17 ವರ್ಷದ ಒಳಗಿನ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಟ್ರಸ್ಟಿ ಚಕೋರ ಮೆಹತಾ, ಪ್ರಾಚಾರ್ಯರಾದ ಪ್ರೀತಿ ಮೆಹತಾ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಮತ್ತುಟೆಬಲ್ ಟೆನ್ನಿಸ್ ತರಬೇತುದಾರ ಬಸವರಾಜ ತಳಕೇರಿ ಹಾಗೂ ಶಿಕ್ಷಕ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.