ಅಂತರ್ಜಲ ಮಟ್ಟ ಹೆಚ್ಚಿಸಲು ವಿವಿಧ ಕಾಮಗಾರಿಗಳನ್ನು ಕೈಗೊಳ್ಳಿ: ವಿಕಾಸ ಡೋಗ್ರಾ ಅಧಿಕಾರಿಗಳಿಗೆ ಸೂಚನೆ
ವಿಜಯಪುರ,ಸೆ.14: ಜಿಲ್ಲೆಯಲ್ಲಿ ನೈಸರ್ಗಿಕ ಸಂಪನ್ಮೂಲ ಕಾಮಗಾರಿಗಳಾದ ಕೆರೆ, ನಾಲಾ, ಕಲ್ಯಾಣಿ ಮತ್ತು ಇನ್ನಿತರ ಕಾಮಗಾರಿಗಳನ್ನು ನಿಯಮಾನುಸಾರ ವೈಜ್ಞಾನಿಕವಾಗಿ ಅನುμÁ್ಠನಗೊಳಿಸಬೇಕು ಎಂದು ಭಾರತ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯದ ನಿರ್ದೇಶಕ ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿ ವಿಕಾಸ ಡೋಗ್ರಾ ಅವರು ಸೂಚನೆ ನೀಡಿದರು.
ಶುಕ್ರವಾರ ತಾಂತ್ರಿಕ ಅಧಿಕಾರಿ ಅನಾಮಿಕಾ ಐಚ್ ಅವರೊಂದಿಗೆ ವಿಜಯಪುರ ಜಿಲ್ಲೆಗೆ ಭೇಟಿ ನೀಡಿ, ವಿಜಯಪುರ ಜಿಲ್ಲೆಯ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಬರಗಾಲ ಘೋಷಣೆಯಾಗಿದ್ದರಿಂದ, ಬರಗಾಲ ಸಂದರ್ಭದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಹಾಗೂ ಅನುμÁ್ಠನ ಇಲಾಖೆಗಳ ಅಡಿಯಲ್ಲಿ ಹಮ್ಮಿಕೊಂಡಿರುವ ಕ್ರಮಗಳ ಮತ್ತು ಅನುμÁ್ಠನ ಮಾಡಿರುವ ವಿವಿಧ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೈಸರ್ಗಿಕ ಸಂಪನ್ಮೂಲ ಕಾಮಗಾರಿಗಳಾದ ಕೆರೆ ಅಭಿವೃದ್ಧಿ, ಹೂಳೆತ್ತುವುದು, ಅಮೃತ ಸರೋವರ ಕಾಮಗಾರಿಗಳು, ನಾಲಾ, ಹಳ್ಳದ ಹೂಳೆತ್ತುವುದು, ಕೃಷಿ ಹೊಂಡ, ಬದು ನಿರ್ಮಾಣ, ಅರಣ್ಯ ಇಲಾಖೆಯಡಿ ನೆಡುತೋಪು ನಿರ್ಮಾಣ, ತೋಟಗಾರಿಕೆ ಕಾಮಗಾರಿಗಳು, ಕೃಷಿ ಇಲಾಖೆ ಕಾಮಗಾರಿಗಳ ಅನುμÁ್ಠನ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಜಲಾನಯನ ಕಾಮಗಾರಿಗಳನ್ನು ಕಾಲ-ಕಾಲಕ್ಕೆ ಜಿಯೋ ಟ್ಯಾಗ್ ಮಾಡುವುದು, ಜಲ ಶಕ್ತಿ ಅಭಿಯಾನದ ಅಡಿಯಲ್ಲಿ (ಜೆಎಸ್‍ಎ) ಅನುμÁ್ಠನಗೊಳಿಸುವ ಕಾಮಗಾರಿಗಳನ್ನು ಹಾಗೂ ಮುಕ್ತಾಯಗೊಂಡ ಕಾಮಗಾರಿಗಳನ್ನು ಕಡ್ಡಾಯವಾಗಿ ಜಲ ಶಕ್ತಿ ಅಭಿಯಾನ (ಜೆಎಸ್‍ಎ)ದ ತಂತ್ರಾಂಶದಲ್ಲಿ ಜಿಯೋಟ್ಯಾಗ್ ಮಾಡಬೇಕು. ಜಲ ಸಂರಕ್ಷಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರ ಜಲಮೂಲಗಳು, ಕುಡಿಯುವ ನೀರಿನ ಮೂಲಗಳು, ಕೆರೆಗಳ ನವೀಕರಣ, ಜಲಾನಯನ ಪ್ರದೇಶ ಅಭಿವೃದ್ಧಿ, ಅರಣ್ಯೀಕರಣ, ತ್ಯಾಜ್ಯ ನೀರಿನ ಮರುಬಳಕೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ನಿಯಮಿತವಾಗಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಗುಣಮಟ್ಟದ ಪರಿಶೀಲನೆ ನಡೆಸಬೇಕು. ಅಂತರ್ಜಲ ಮಟ್ಟ ಹೆಚ್ಚಿಸುವ ಕಾಮಗಾರಿಗಳಾದ ಮಳೆನೀರು ಕೊಯ್ಲು ಘಟಕ, ಬೋರ್‍ವೆಲ್ ಮರುಪೂರಣ ಘಟಕ ಹಾಗೂ ವಿವಿಧ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಹಾಗೂ ನಿಯಮಾನುಸಾರ ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಜಿಲ್ಲಾ ಪಂಚಾಯತಿಯ ಆವರಣದಲ್ಲಿರುವ ಜಲ ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಲ ಶಕ್ತಿ ಕೇಂದ್ರದ ವ್ಯವಸ್ಥೆ ಮತ್ತು ನಿರ್ವಹಣೆ ಕುರಿತು ಮೆಚ್ಚುಗೆÉ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ ಹಾಗೂ ಜಿಲ್ಲೆಯ ಎಲ್ಲ ಅನುμÁ್ಠನ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.