ಯೋಜನೆಗಳು ಸರಿಯಾಗಿ ಅನುಷ್ಠಾನಗೊಳ್ಳಲಿ
ಧಾರವಾಡ,ಸೆ14: ಕೇಂದ್ರ ಪುರಸ್ಕøತ ಜನಪರ ಕಲ್ಯಾಣ ಯೋಜನೆಗಳು ರೈತರಿಗೆ ಜನ ಸಾಮಾನ್ಯರಿಗೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ತಲುಪಿಸಲಿ ಎಂದು ಕೇಂದ್ರ ಗ್ರಾಹಕರ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಚಿವರಾದ ಪ್ರಲ್ಹಾದ ಜೋಶಿ ತಿಳಿಸಿದರು.
ಧಾರವಾಡ ಜಿಲ್ಲಾ ಪಂಚಾಯತನಲ್ಲಿ ಜರುಗಿದ ದಿಶಾ ಸಮಿತಿಯ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಬೆಳೆ ಪರಿಹಾರ ನರೇಗಾ ವಸತಿ, ಸ್ವಚ್ಛ ಭಾರತ, ಶಿಕ್ಷಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚಿಸಿದರು. ಕೇಂದ್ರ ಪುರಸ್ಕøತ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕೆಂದರು.
2023-24 ನೇ ಸಾಲಿನ ಹಿಂಗಾರು ಬೆಳೆ ಪರಿಹಾರ ದೊರೆಯದ ಕಾರಣ ಅನೇಕ ರೈತರು ಅಹವಾಲುಗಳನ್ನು ಸಲ್ಲಿಸುತ್ತಿದ್ದು ಈ ಬಗ್ಗೆ ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ರೈತರಿಗೆ ಸರಿಯಾಗಿ ಸ್ಪಂದಿಸುವಂತೆ ಅವರು ತಿಳಿಸಿದರು.