ಐತಿಹಾಸಿಕ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಲು ಕರೆ
ಸಂಜೆವಾಣಿ ವಾರ್ತೆ
ಹೊಸಪೇಟೆ, ಸೆ.14: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಜಿಲ್ಲೆಯಲ್ಲಿ ನಾಳೆ ನಡೆಯುವ ಐತಿಹಾಸಿಕ ಮಾನವ ಸರಪಳಿ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು  ಶಾಸಕ ಎಚ್.ಆರ್.ಗವಿಯಪ್ಪ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿ.ಬಿ. ಡ್ಯಾಮ್ ಮೊದಲನೇ ಸೇತುವೆಯಿಂದ ಗಣೇಶ ದೇವಸ್ಥಾನದವರೆಗೆ, ಸಾಯಿಬಾಬಾ ಸರ್ಕಲ್, ಬಸವೇಶ್ವರ ಸರ್ಕಲ್, ಅಪ್ಪು ಸರ್ಕಲ್, ಬಳ್ಳಾರಿ ರೋಡ್ ಸರ್ಕಲ್, ಕಾರಿಗನೂರು, ವಡ್ಡರಹಳ್ಳಿ, ಪಿ.ಕೆ.ಹಳ್ಳಿ, ಬಯಲುವದ್ದಿಗೇರಿ, ಧರ್ಮಸಾಗರ, ಗಾದಿಗನೂರು, ಭುವನಹಳ್ಳಿ ಗ್ರಾಮದವರೆಗೆ ಅಂದಾಜು 40 ಕಿಲೋ ಮೀಟರ್ ಮಾನವ ಸರಪಳಿ ಕಾರ್ಯಕ್ರಮವು ವಿಶಿಷ್ಟವಾಗಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತು ವಿವಿಧ ಇಲಾಖೆಗಳು ಈ ಕಾರ್ಯಕ್ರಮಕ್ಕೆ ಅಚ್ಚುಕಟ್ಟಾಗಿ ತಯಾರಿ ಮಾಡಿಕೊಂಡಿವೆ. ವಿದ್ಯಾರ್ಥಿ ಯುವ ಜನರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಎಲ್ಲ ನೌಕರ-ಸಿಬ್ಬಂದಿ ವರ್ಗದ ವರು, ಕೃಷಿ ಕೂಲಿ ಕಾರ್ಮಿಕರು, ಸಾಹಿತಿಗಳು, ಹೋರಾಟಗಾರರು, ಮಹಿಳೆಯರು, ಹಿರಿಯರು ಸೇರಿದಂತೆ ಪ್ರತಿಯೊಬ್ಬರು ಭಾಗಿಯಾಗಿಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ.