ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆ
ಕೊಲ್ಹಾರ: ಸೆ.೧೪:ಸೆಪ್ಟೆಂಬರ್ ೧೫ರಂದು ಪ್ರಜಾಪ್ರಭುತ್ವ ದಿನವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಇದರ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ನಾಗರಿಕರು ಭಾಗವಹಿಸಿ ಸಂಭ್ರಮದಿAದ ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ್ ಎಸ್ ಎಸ್ ನಾಯಕಲಮಠ ಅವರು ಹೇಳಿದರು
ಪಟ್ಟಣದ ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಮಾನವ ಸರಪಳಿಗೆ ಬೇಕಾದ ಸ್ಥಳಾಂತರ ವ್ಯವಸ್ಥೆಗಾಗಿ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತದೆ. ಕಾರ್ಯಕ್ರಮವು ಬೆಳಿಗ್ಗೆ ೯ ಗಂಟೆಗೆ ನಡೆಯಲಿದ್ದು, ಎಲ್ಲರೂ ೮ ಗಂಟೆಗೆ ಸ್ಥಳದಲ್ಲಿ ಹಾಜರಿರಬೇಕು ಎಂದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಪಟ್ಟಣ ಪಂಚಾಯತಿ ಸದಸ್ಯರು ಸಹಿತ ಅನೇಕರು ಉಪಸ್ಥಿತರಿದ್ದರು
