ಜುಡೋ: ರಾಜ್ಯಮಟ್ಟಕ್ಕೆ ಎಕ್ಸಲಂಟ್ ಶಾಲೆಯ ವಿದ್ಯಾರ್ಥಿನಿ ಆಯ್ಕೆ
ವಿಜಯಪುರ:ಸೆ.೧೪:ಜಿಲ್ಲಾ ಪಂಚಾಯತ ವಿಜಯಪುರ ಉಪನಿರ್ದೇಶಕ ಕಛೇರಿ (ಆಡಳಿತ), ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಿದ ಎಕ್ಸ್ಲಂಟ್ ಆಂಗ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಪುಷ್ಪಾ ರಾಠೋಡ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆ ಕುರಿತು ಶಾಲೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಡಾ. ಶಿವಾನಂದ ಎನ್. ಕೆಲೂರ ಹರ್ಷ ವ್ಯಕ್ತ ಪಡಿಸಿ ಅಭಿನಂದಿಸಿದ್ದಾರೆ.
ಶಾಲೆಯ ಸಂಯೋಜಕÀ ಎನ್.ಜಿ. ಯರನಾಳ, ಶಾಲಾ ಪ್ರೌಢವಿಭಾಗದ ಮುಖ್ಯ ಗುರುಗಳಾದ ಶ್ರೀರಾಮ ಸುಕ್ತೆ, ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳಾದ ಎಸ್.ಬಿ. ಹೆಗಳಾಡಿ ಹಾಗೂ ತರಬೇತಿದಾರರಾದ ಗೌರೀಶ ಕಟ್ಟಿಮನಿ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.