ಟೇಬಲ್ ಟೆನ್ನಿಸ್ : ರಾಜ್ಯ ಮಟ್ಟಕ್ಕೆ ಆಯ್ಕೆ
ಅಥಣಿ : ಸೆ.೧೪:ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸನ್ ೨೦೨೪-೨೫ ನೇ ಸಾಲಿನಲ್ಲಿ ನಿಪ್ಪಾಣಿಯ ಜಿ.ಐ.ಬಾಗೇಬಾಡಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಅಥಣಿಯ ಜಾಧವಜಿ ಶಿಕ್ಷಣ ಸಂಸ್ಥೆಯ ಜೆ.ಎ. ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ.ಲಕ್ಷ್ಮೀ ಕಾಂಬಳೆ ಮತ್ತು ಭಕ್ತಿ ಪವಾರ್ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ರಾಮ.ಬಿ.ಕುಲಕರ್ಣಿ ಮತ್ತು ಆಡಳಿತ ಮಂಡಳಿಯ ಸಂಚಾಲಕ ಸಂದೀಪ ಸಂಗೋರಾಮ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರ ಎಂ.ಪಿ.ಮೇತ್ರಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
